ಸುವರ್ಣ ಮಹೋತ್ಸವಕ್ಕೆ ಸಜ್ಜಾದ ಬಿಎಸ್‍ಎನ್‍ಎಲ್ ನೌಕರರ ಪತ್ತಿನ ಸಹಕಾರ ಸಂಘ

ಬೆಂಗಳೂರು,ಆ.30- ಬಿಎಸ್‍ಎನ್‍ಎಲ್ ನೌಕರರ ಪತ್ತಿನ ಸಹಕಾರ ಸಂಘ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವವನ್ನು ಸೆ.2ರಂದು ಬೆಳಗ್ಗೆ 10.30ಕ್ಕೆ ವಸಂತ ನಗರದ ತಿಮ್ಮಯ್ಯ ರಸ್ತೆಯಲ್ಲಿರುವ ಸಂಯುಕ್ತ ಗುಜರಾತಿ ಭವನ, ಸರ್ಕಾರ್ ಪಟೇಲ್ ಭವನ ಸಭಾಂಗಣದಲ್ಲಿ ಹಮ್ಮಿಕೊಂಡಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ, ಸುವರ್ಣ ಸೌರಭ ಸ್ಮರಣ ಸಂಚಿಕೆ ಲೋಕಾರ್ಪಣೆಯನ್ನು ಮುಖ್ಯ ಮಹಾಪ್ರಬಂಧಕ ಆರ್.ಮಣಿ ನೆರವೇರಿಸಲಿದ್ದಾರೆ.
ಅಂತರ್ಜಾಲ ತಾಣವನ್ನು ಪ್ರದಾನ ಮಹಾಪ್ರಬಂಧಕರಾದ ಎಸ್.ಜನಾರ್ಧನ್ ರಾವ್ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಬಿಎಸ್‍ಎನ್‍ಎಲ್ ನೌಕರರ ಪತ್ತಿನ ಸಹಕಾರ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರವನ್ನು ಸಹಕಾರ ಸಂಘಗಳ ನಿಬಂಧಕರಾದ ಎಂ.ಕೆ.ಅಯ್ಯಪ್ಪ ವಿತರಿಸುವರು.
ಮಧ್ಯಾಹ್ನ 2.30ಕ್ಕೆ ಬಿಎಸ್‍ಎನ್‍ಎಲ್ ನೌಕರರಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಭರತನಾಟ, ಗೀತಗಾಯನ ಹಾಗೂ ಖ್ಯಾತ ಹಾಸ್ಯ ಸಾಹಿತಿ ಎಂ.ಎಸ್.ನರಸಿಂಹಮೂರ್ತಿ ರಿಚರ್ಡ್ ಲೂಯಿಸ್, ಮೈಸೂರು ಆನಂದ್, ಕೀರ್ಲೋಸ್ಕರ್ ಸತ್ಯ ಅವರಿಂದ ನಗೆಹಬ್ಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಮುಖ್ಯ ಅತಿಥಿಯಾಗಿ ಖ್ಯಾತ ಸಂಗೀತ ನಿರ್ದೇಶಕ ವಿ.ಮನೋಹರ್ ಭಾಗವಹಿಸುತ್ತಿದ್ದಾರೆ ಎಂದು ಬಿಎಸ್‍ಎನ್‍ಎಲ್ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಂದ್ರಪ್ಪರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ