ಸಾರಿಗೆ ಅಧಿಕಾರಿಗಳಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ 45 ಶಾಲಾ ವಾಹನಗಳ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು, ಆ.30-ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳನ್ನು ತಪಾಸಣೆ ನಡೆಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು ಇಂದು 45 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಕೆ.ಆರ್.ಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ಆಂದೋಲನ ನಡೆಸಿರುವ ಸಾರಿಗೆ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲಾ ವಾಹನಗಳನ್ನು ತಪಾಸಣೆ ನಡೆಸಿದರು.
ಸುಮಾರು 100 ವಾಹನಗಳನ್ನು ಪರಿಶೀಲಿಸಿದಾಗ ಅದರಲ್ಲಿ 45 ವಾಹನಗಳು ಸಾರಿಗೆ ಇಲಾಖೆ ನಿಯಮಗಳನ್ನು ಉಲ್ಲಂಘಿಸಿರುವುದು ಮತ್ತು ಮಕ್ಕಳ ಸುರಕ್ಷತೆಗೆ ಸೂಕ್ತ ಕ್ರಮಕೈಗೊಳ್ಳದಿರುವುದು ಪತ್ತೆಯಾಗಿದೆ.
ಅಗತ್ಯಕ್ಕಿಂತಲೂ ಹೆಚ್ಚು ಮಕ್ಕಳನ್ನು ಕರೆದೊಯ್ಯುತ್ತಿರುವುದು ಪತ್ತೆಯಾಗಿದೆ. ಮಕ್ಕಳ ಸುರಕ್ಷತೆಗೆ ವಾಹನದಲ್ಲಿ ಸರಿಯಾದ ವ್ಯವಸ್ಥೆ ಕಲ್ಪಿಸದಿರುವುದರಿಂದ ವಾಹನ ಮಾಲೀಕರಿಗೆ ಆರ್‍ಟಿಒ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ