ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಕಲ ಸಿದ್ಧತೆ

ಬೆಂಗಳೂರು, ಆ.30- ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ, ನಾಳೆ ನಡೆಯಲಿರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಕಲ ಸಿದ್ಧತೆಗಳು ನಡೆದಿದ್ದು, ಚುನಾವಣಾ ಆಯೋಗ ಅಗತ್ಯ ಸಿದ್ಧತೆ, ಭದ್ರತೆಗಳನ್ನು ಮಾಡಿಕೊಂಡಿದೆ.
ಒಟ್ಟು 2574 ವಾರ್ಡ್‍ಗಳಿಗೆ ವಿವಿಧ ಪಕ್ಷಗಳು, ಪಕ್ಷೇತರರು ಸೇರಿದಂತೆ 9121 ಅಭ್ಯರ್ಥಿಗಳು ಕಣದಲ್ಲಿದ್ದು, ನಾಳೆ ಮತದಾನ ನಡೆಯಲಿದೆ. ಸೆ.3ರಂದು ಫಲಿತಾಂಶ ಪ್ರಕಟವಾಗಲಿದೆ.

ಚುನಾವಣೆ ನಡೆಯುವ ಪ್ರದೇಶಗಳಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಆಯಾ ಜಿಲ್ಲಾಧಿಕಾರಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ, ನಗರ ಪೆÇಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.
ಪೆÇಲೀಸರ ತಂಡ, ಫ್ಲೈಯಿಂಗ್ ಸ್ಕ್ವಾಡ್, ಮತಗಟ್ಟೆಗಳಿಗೆ ಪೆÇಲೀಸ್ ಸಿಬ್ಬಂದಿ ವ್ಯವಸ್ಥೆ ಕಲ್ಪಿಸಲಾಗಿದೆ.
ನಾಳೆ ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ನಡೆಯಲಿರುವ ಮತದಾನಕ್ಕೆ ಚುನಾವಣಾ ಆಯೋಗ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್, ಅಗತ್ಯ ಪರಿಕರಗಳೊಂದಿಗೆ ಚುನಾವಣಾ ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದರು.

ಪ್ರಕೃತಿ ವಿಕೋಪದಿಂದ ಉಂಟಾಗಿರುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಮೂರು ಪಟ್ಟಣ ಪಂಚಾಯಿತಿ ಚುನಾವಣೆಯನ್ನು ತಡೆಹಿಡಿಯಲಾಗಿದೆ. ಕೆಲವು ನಗರ ಸಭೆಗಳಿಂದ 12 ವಾರ್ಡ್‍ಗಳಿಗೆ ಹಾಗೂ ಪುರಸಭೆಗಳಿಂದ 17 ವಾರ್ಡ್‍ಗಳಿಗೆ ಒಟ್ಟು 29 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಲಬುರಗಿ ಜಿಲ್ಲೆ ಅಫ್ಜಲ್‍ಪುರ ಪುರಸಭೆ ವಾರ್ಡ್ ನಂ.19ರ ಎಲ್ಲ ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತವಾಗಿದ್ದರಿಂದ ಈ ವಾರ್ಡ್‍ಗೆ ಚುನಾವಣೆ ನಡೆಯುತ್ತಿಲ್ಲ. ಅದೇ ರೀತಿ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ನಗರಸಭೆಯ ವಾರ್ಡ್ ನಂ.9ರಲ್ಲಿ ಸ್ಪರ್ಧಿಸಿದ್ದ ಮನ್ನಣೆ ಪಡೆದ ಬಿಎಸ್‍ಪಿ ಅಭ್ಯರ್ಥಿ ಸಿ.ಎಸ್.ರಮೇಶ್ ನಿಧನದ ಹಿನ್ನೆಲೆಯಲ್ಲಿ ಈ ವಾರ್ಡ್‍ನ ಚುನಾವಣೆಯನ್ನು ರದ್ದುಪಡಿಸಲಾಗಿದೆ.

ಇದನ್ನು ಹೊರತುಪಡಿಸಿ ಉಳಿದ 29 ನಗರಸಭೆ, 53 ಪುರಸಭೆ, 23 ಪಟ್ಟಣ ಪಂಚಾಯಿತಿ, ಒಟ್ಟು 105 ನಗರ ಸ್ಥಳೀಯ ಸಂಸ್ಥೆಗಳ 2574 ವಾರ್ಡ್‍ಗಳಿಗೆ ನಡೆಯಲಿರುವ ಚುನಾವಣೆಗೆ ಅಗತ್ಯ ಚುನಾವಣಾ ಸಾಮಗ್ರಿಗಳನ್ನು ತೆಗೆದುಕೊಂಡು ಸಿಬ್ಬಂದಿ ಇಂದು ಮತಗಟ್ಟೆಗಳತ್ತ ತೆರಳಿದರು.
ಒಟ್ಟು 18,07,336 ಮಹಿಳಾ ಮತದಾರರು ಸೇರಿದಂತೆ 36,03,691 ಮತದಾರರಿದ್ದು, ನಗರಸಭೆಗೆ 2067 ಮತಗಟ್ಟೆ, ಪುರಸಭೆಗೆ 1422, ಪಟ್ಟಣ ಪಂಚಾಯಿತಿಗೆ 408 ಒಟ್ಟು 3897 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಭದ್ರತೆಗಾಗಿ ಪೆÇಲೀಸ್ ಸಿಬ್ಬಂದಿಗಳನ್ನೊಳಗೊಂಡಂತೆ 36,000 ಅಧಿಕಾರಿ/ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ.
ನಾಳೆ ಬೆಳಗ್ಗೆ 7 ರಿಂದ 5 ಗಂಟೆವರೆಗೆ ಮತದಾನ ನಡೆಯಲಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಭದ್ರತೆ ಕೈಗೊಳ್ಳಲಾಗಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆ ಪ್ರದೇಶಗಳಿಗೆ ಹೆಚ್ಚುವರಿ ಪೆÇಲೀಸ್ ಭದ್ರತೆ ನಿಯೋಜಿಸಲಾಗಿದೆ.
ತುಮಕೂರು, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ ಸೇರಿದಂತೆ ವಿವಿಧೆಡೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೆÇಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ