ರಾಜಕೀಯ ವ್ಯವಸ್ಥೆ ಬದಲಾಗಬೇಕಾಗಿದೆ: ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಶ್ರೀರಾಮ ರೆಡ್ಡಿ

Varta Mitra News

ಬೆಂಗಳೂರು,ಆ.30- ಭಾರತದ ಪ್ರಸಕ್ತ ರಾಜಕೀಯ ವ್ಯವಸ್ಥೆ ಬದಲಾಗಬೇಕಾದ ಅಗತ್ಯವಿದೆ. ಮುಂಬರುತ್ತಿರುವ ಸಾರ್ವಜನಿಕ ಚುನಾವಣೆ ಹಿನ್ನೆಲೆಯಲ್ಲಿ ಈ ಬದಲಾವಣೆ ಅನಿವಾರ್ಯ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಶ್ರೀರಾಮ ರೆಡ್ಡಿ ಅಭಿಪ್ರಾಯಪಟ್ಟರು.
ಶಾಸಕರ ಭವನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತದಲ್ಲಿ ಚುನಾವಣಾ ಸುಧಾರಣೆ ಕುರಿತ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದೇಶದಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ ದೇಶದಲ್ಲಿ ಇರುವ ರಾಜಕೀಯ ವ್ಯವಸ್ಥೆ ಪರಿವರ್ತನೆಯಾಗಬೇಕಾದ ತುರ್ತು ಅಗತ್ಯವಿದೆ. ಇದರೊಂದಿಗೆ ಚುನಾವಣೆಗಳ ಸುಧಾರಣೆಯು ಆಗಬೇಕಿದೆ ಎಂದು ಪ್ರತಿಪಾದಿಸಿದರು.
ಪ್ರಧಾನಿ ಮೋದಿ ಅವರ ಬೆನ್ನಿಗೆ ನಿಂತಿರುವ ಪ್ರಮುಖ ಕಾಪೆರ್Çೀರೇಟ್ ಸಂಸ್ಥೆಗಳು ರಾಜಕೀಯ ಪಕ್ಷಗಳ ನಿಧಿಯ ಮೇಲೆ ಪ್ರಭಾವ ಬೀರುತ್ತಿರುವುದರಿಂದ ಚುನಾವಣೆಗಳಲ್ಲಿ ಸಾಕಷ್ಟು ಪರಿಣಾಮ ಎದುರಾಗುತ್ತಿದೆ ಎಂದು ಆರೋಪಿಸಿದರು.

ಬಹು ವಿಧದ ಸಂಸ್ಕøತಿಯನ್ನು ಅವಲಂಬಿಸಿರುವ ಭಾರತದ ಒಂದೊಂದು ರಾಜ್ಯದಲ್ಲೂ ಒಂದೊಂದು ರೀತಿಯ ರಾಜಕೀಯ ಪರಿಸ್ಥಿತಿ ಇದೆ. ದೇಶದಲ್ಲಿ ಅನಕ್ಷರಸ್ಥರೇ ಇದ್ದರೂ ಯೋಚಿಸಿ ಮತ ಚಲಾಯಿಸುತ್ತಾರೆ. ಜನರ ಅಭಿಮತವನ್ನು ಸರ್ಕಾರಕ್ಕೆ ತಿಳಿಸುವ ಮಾಧ್ಯಮ ಈ ಚುನಾವಣೆ. ಹಾಗಿದ್ದು, ಲೋಕಸಭೆ , ವಿಧಾನಸಭೆ ಹಾಗೂ ಪಂಚಾಯ್ತಿ ಚುನಾವಣೆಗಳು ಪರಸ್ಪರ ಭಿನ್ನವಾಗಿರುತ್ತದೆ ಎಂದು ವಿವರಿಸಿದರು.
ಚುನಾವಣೆಗಳಲ್ಲಿ ಜಯಭೇರಿ ಬಾರಿಸಿದಂತಹ ಪಕ್ಷಗಳು ನೆಲಕಚ್ಚಿರುವ ನಿದರ್ಶನಗಳು ಸಾಕಷ್ಟಿವೆ. ಅದರಲ್ಲೂ ಲೋಕಸಭಾ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಅಥವಾ ಪಂಚಾಯ್ತಿ ಚುನಾವಣೆಯಲ್ಲಿ ಪರಾಭವಗೊಂಡ ಪಕ್ಷಗಳು ಇವೆ ಎಂದು ಹೇಳಿದರು.
ಪ್ರಸ್ತುತ ದಿನಗಳಲ್ಲಿ ಕೆಟ್ಟ ಆಲೋಚನೆಯ ವಿರುದ್ದ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಹಿಳೆ, ಯುವಜನ ಹಾಗೂ ರೈತರ ಅಭಿವೃದ್ದಿಯ ಬಗ್ಗೆ ಚಿಂತೆ ಇಲ್ಲ. ಪ್ರಜಾಪ್ರಭುತ್ವಕ್ಕೆ ಆದ್ಯತೆ ನೀಡಬೇಕಾದ ರೀತಿಯಲ್ಲಿ ನಡೆಸಬೇಕಾದಂತಹ ಆಡಳಿತದಲ್ಲಿ ಆಸಕ್ತಿ ಇಲ್ಲದವರು ಒಂದು ದೇಶದ ಚುನಾವಣೆಯ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.
ನಮ್ಮ ದೇಶದ ಚುನಾವಣೆಯಲ್ಲಿ ಪ್ರಜಾಪ್ರಭುತ್ವದ ಮೇಲೆ ಅವಲಂಬಿತವಾಗಿದೆ ಎಂದು ಮೊದಲು ಅರ್ಥ ಮಾಡಿಕೊಳ್ಳಲಿ ಎಂದರು.
ಸಂವಾದದಲ್ಲಿ ಪಾಲ್ಗೊಂಡಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಈಗಿನ ರಾಜಕೀಯ ವ್ಯವಸ್ಥೆಯಲ್ಲಿ ಪರಿವರ್ತನೆಯಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಸಂವಾದದ ಅಧ್ಯಕ್ಷತೆಯನ್ನು ವಿಧಾನಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ವಹಿಸಿದ್ದರು. ಜೆಡಿಯುನ ನಾಡಗೌಡ, ಸಿಪಿಐಎಂನ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ವಿ.ಜಿ.ಕೆ.ನಾಯರ್, ಸಿಪಿಐ ರಾಜ್ಯ ಸದಸ್ಯ ವಿಶ್ವನಾಥ ನಾಯಕ್, ಶ್ರೀರಾಮ್, ಸಿದ್ದನಗೌಡ ಪಾಟೀಲ್ ಮತ್ತಿತರರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ