ಸಣ್ಣ ರೈತರು, ದುರ್ಬಲ ವರ್ಗದವರಿಗೆ ಲೇವಾದೇವಿದಾರರು ಕಿರುಕುಳ ನೀಡದಂತೆ ಅಗತ್ಯ ಕ್ರಮ: ಜಿಲ್ಲಾಧಿಕಾರಿಗಳು ಮತ್ತು ಪೆÇಲೀಸ್ ವರಿಷ್ಠಾಧಿಕಾರಿಗಳಿಗೆ ಸರ್ಕಾರ ನಿರ್ದೇಶನ

ಬೆಂಗಳೂರು, ಆ.30- ಋಣಭಾರ ಪೀಡಿತರಾದ ಸಣ್ಣ ರೈತರು, ದುರ್ಬಲ ವರ್ಗದವರಿಗೆ ಲೇವಾದೇವಿದಾರರು ಕಿರುಕುಳ ನೀಡದಂತೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯದ ಎಲ್ಲ ಪ್ರಾದೇಶಿಕ ಆಯುಕ್ತರು, ಎಲ್ಲ ವಲಯಗಳ ಪೆÇಲೀಸ್ ಮಹಾನಿರೀಕ್ಷಕರು, ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಪೆÇಲೀಸ್ ವರಿಷ್ಠಾಧಿಕಾರಿಗಳಿಗೆ ಸರ್ಕಾರ ನಿರ್ದೇಶನ ನೀಡಿದೆ.
ಈಗಾಗಲೇ ಋಣಭಾರ ಪೀಡಿತ ಸಣ್ಣರೈತರಿಗೆ ಭೂರಹಿತ ರೈತ ಕೃಷಿ ಕಾರ್ಮಿಕರಿಗೆ ಹಾಗೂ ದುರ್ಬಲ ವರ್ಗದ ಜನರಿಗೆ ಸಾಲ ನೀಡಿದ್ದಾರೆ ಎನ್ನಲಾದ ಲೇವಾದೇವಿಗಾರರಿಂದ ಸಾಲ ಪಡೆದವರ ಮೇಲೆ ವಿವಿಧ ರೀತಿಯ ಕಾನೂನುಬಾಹಿರ ಒತ್ತಡಗಳು ವರದಿಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಈ ನಿರ್ದೇಶನ ನೀಡಿದ್ದಾರೆ.
ಕೂಡಲೇ ಸಾಲ ಪಡೆದವರ ಮೇಲೆ ಯಾವುದೇ ರೀತಿಯ ಕಾನೂನು ಬಾಹಿರ ಒತ್ತಡ ಹಾಕದಂತೆ,ದೌರ್ಜನ್ಯ ಎಸಗದಂತೆ ತಡೆಗಟ್ಟಲು ಕಾನೂನು ರೀತ್ಯ ಸೂಕ್ತ ಕ್ರಮ ಜರುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯ ಸರ್ಕಾರ ಋಣಭಾರ ಪರಿಹಾರ ವಿಧೇಯಕ 2018ನ್ನು ರಾಜ್ಯದಲ್ಲಿನ ಋಣಭಾರ ಪೀಡಿತ ಸಣ್ಣ ರೈತರಿಗೆ, ಭೂರಹಿತ ರೈತ ಕೃಷಿ ಕಾರ್ಮಿಕರಿಗೆ ಹಾಗೂ ದುರ್ಬಲ ವರ್ಗದ ಜನರ ಋಣಭಾರದ ಸಮಸ್ಯೆಗಳ ಪರಿಹಾರಕ್ಕಾಗಿ ಮಂಡಿಸಲು ಮುಂದಾಗಿರುವ ವಿಚಾರ ಈಗಾಗಲೇ ಪ್ರಕಟವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ