ಮೆಡಿಕಲ್ ಸ್ಟೋರ್ ಬಾಗಿಲು ಹಾಕಿಕೊಂಡು ಬೈಕ್‍ನಲ್ಲಿ ಮನೆಗೆ ತೆರಳುತ್ತಿದ್ದ ಯುವಕನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವು

ಬೆಂಗಳೂರು, ಆ.31- ಮೆಡಿಕಲ್ ಸ್ಟೋರ್ ಬಾಗಿಲು ಹಾಕಿಕೊಂಡು ಬೈಕ್‍ನಲ್ಲಿ ಮನೆಗೆ ತೆರಳುತ್ತಿದ್ದ ಯುವಕನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಶವಂತಪುರ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಟ್ಟಿಗೆಪಾಳ್ಯದ ಟೆಲಿಕಾಂ ಕಾಲೇಜು ನಿವಾಸಿ ಸಂದೀಪ್ ಶರ್ಮ (26) ಮೃತಪಟ್ಟ ಬೈಕ್ ಸವಾರ.
ಸಂಜಯನಗರದಲ್ಲಿ ಸಂದೀಪ್ ಶರ್ಮ ಮೆಡಿಕಲ್ ಸ್ಟೋರ್ ನಡೆಸುತ್ತಿದ್ದು, ರಾತ್ರಿ ಎಂದಿನಂತೆ ಅಂದಿನ ವಹಿವಾಟು ಮುಗಿಸಿಕೊಂಡು ಅಂಗಡಿಗೆ ಬೀಗ ಹಾಕಿ 11.30ರ ಸಮಯದಲ್ಲಿ ಬೈಕ್‍ನಲ್ಲಿ ಮನೆಗೆ ಹೋಗುತ್ತಿದ್ದರು.
ಎಂಇಎಸ್ ರಿಂಗ್ ರಸ್ತೆಯ ರೈಲ್ವೆ ಬ್ರಿಡ್ಜ್ ಬಳಿ ಅತಿ ವೇಗವಾಗಿ ಮುನ್ನುಗ್ಗಿದ ಲಾರಿ ಇವರ ಬೈಕ್‍ಗೆ ಅಪ್ಪಳಿಸಿದೆ. ಪರಿಣಾಮವಾಗಿ ಸಂದೀಪ್ ಶರ್ಮ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಯಶವಂತಪುರ ಸಂಚಾರಿ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ