
ಕೋಲಾರ, ಆ.31- ಟಾಟಾ ಸುಮೋ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-75ರ ಕಪ್ಪಲಮಡಗು ಗ್ರಾಮದ ಬಳಿ ನಡೆದಿದೆ.
ಬೈರಕೋಡು ಗ್ರಾಮದ ನಂಜುಂಡಪ್ಪ (51), ನಂಜಪ್ಪ (50) ಮೃತಪಟ್ಟ ದುರ್ದೈವಿಗಳು.
ಕುಟುಂಬ ಸದಸ್ಯರು ಟಾಟಾ ಸುಮೋ ವಾಹನದಲ್ಲಿ ಆಂಧ್ರದ ಕಡೆಗೆ ತೆರಳುತ್ತಿದ್ದಾಗ ಇದೇ ಮಾರ್ಗವಾಗಿ ಚಲಿಸುತ್ತಿದ್ದಾಗ ಕೆಎಸ್ಆರ್ಟಿಸಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ರಭಸಕ್ಕೆ ಕಾರು ರಸ್ತೆ ಬದಿಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗಂಭೀರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಮುಳಬಾಗಿಲು ಗ್ರಾಮಾಂತರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.