ಟ್ವಿಟರ್’ಗೆ ಎಂಟ್ರಿ ಕೊಟ್ಟ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ಪ್ರವೇಶಿಸಿದ್ದಾರೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಶತದಿನ ಪೂರೈಸಿದ ದಿನವೇ ದೇವೇಗೌಡ ಅವರು ಸಾಮಾಜಿಕ ಜಾಲತಾಣ ಟ್ವಿಟರ್’ಗೆ ಅಧಿಕೃತವಾಗಿ ಪ್ರವೇಶ ಮಾಡಿದ್ದಾರೆ. ಅಲ್ಲದೆ, ನೂರು ದಿನ ಪೂರೈಸಿರುವ ಪುತ್ರ ಕುಮಾರಸ್ವಾಮಿ ನೇತೃತ್ವದ ಸರ್ಕಾರಕ್ಕೆ ಶುಭ ಹಾರೈಸುವ ಮೂಲಕ ಮೊಟ್ಟ ಮೊದಲ ಟ್ವೀಟ್ ಮಾಡಿದ್ದಾರೆ.

H D Devegowda@H_D_Devegowda

ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತ್ರತ್ವದ ಮೈತ್ರಿಕೂಟ ಸರಕಾರ ಶತದಿನಗಳನ್ನು ಪೂರೈಸಿದೆ. ಸಂದರ್ಭದಲ್ಲಿ ಮೈತ್ರಿಕೂಟದಲ್ಲಿರುವ ಸಚಿವರು ಹಾಗೂ ಶಾಸಕರೆಲ್ಲರಿಗೂ ಶುಭ ಕೋರುತ್ತೇನೆ. ಸರಕಾರ ಐದು ವರ್ಷಗಳ ಕಾಲ ಜನಪರವಾಗಿ ಆಡಳಿತ ನಡೆಸುವ ಮೂಲಕ ರಾಜ್ಯದ ಅಭಿವೃದ್ಧಿ ಹೊಸ ಎತ್ತರಕ್ಕೇರಲೆಂದು ಹಾರೈಸುತ್ತೇನೆ.

ರಾಷ್ಟ್ರದ ಹಿರಿಯ ರಾಜಕಾರಣಿಯಲ್ಲಿ ಒಬ್ಬರಾಗಿರುವ ದೇವೇಗೌಡ ಅವರು ಟ್ವಿಟರ್’ಗೆ ಪ್ರವೇಶಿಸುತ್ತಿದ್ದಂತೆಯೇ ಪುತ್ರ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಶತದಿನದ ಶುಭ ಹಾರೈಕೆ ಮಾಡಿದ್ದಾರೆ. ಅಲ್ಲದೆ, ಮೈತ್ರಿಕೂಟದಲ್ಲಿರುವ ಎಲ್ಲಾ ನಾಯಕರು, ಸಚಿವರು, ಶಾಸಕರಿಗೆಲ್ಲಾ ಶುಭ ಕೋರಿದ್ದಾರೆ.

ಸಮ್ಮಿಶ್ರ ಸರ್ಕಾರವು 5 ವರ್ಷಗಳ ಕಾಲ ಜನಪರ ಆಡಳಿತ ನಡೆಸುವ ಮೂಲಕ ರಾಜ್ಯದ ಅಭಿವೃದ್ಧಿ ಹೊಸ ಎತ್ತರಕ್ಕೇರಲಿ ಎಂದು ಶುಭ ಹಾರೈಸಿಸಿದ್ದಾರೆ.

ಖಾತೆ ಆರಂಭಿಸಿರುವ ದೇವೇಗೌಡ ಅವರು ಸದ್ಯಕ್ಕೆ ಎರಡು ಖಾತೆಗಳನ್ನು ಮಾತ್ರ ಫಾಲೋ ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಖಾಸಗಿ ಖಾತೆ ಮತ್ತು ಸಿಎಂ ಆಫ್ ಕರ್ನಾಟಕ ಖಾತೆಯನ್ನು ಮಾತ್ರ ಫಾಲೋ ಮಾಡಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ