ಬೆಂಗಳೂರು, ಆ.31-ನಗರದ ಹೃದಯಭಾಗದಲ್ಲಿರುವ ದಾಸಪ್ಪ ಹೆರಿಗೆ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಿ ಮೇಲ್ದರ್ಜೆಗೇರಿಸಲಾಗುವುದು ಎಂದು ಬಿಬಿಎಂಪಿ ಮೇಯರ್ ಸಂಪತ್ರಾಜ್ ಭರವಸೆ ನೀಡಿದ್ದಾರೆ.
ಟೌನ್ಹಾಲ್ ಬಳಿ ಇರುವ ದಾಸಪ್ಪ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ದಾಸಪ್ಪ ಆಸ್ಪತ್ರೆಯಿಂದ ಸಾಮಾನ್ಯ ಜನರಿಗೆ ಸಾಕಷ್ಟು ಅನುಕೂಲವಿದೆ. ಈ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುವುದು. ಆಸ್ಪತ್ರೆಯಲ್ಲಿ 4 ಅಂತಸ್ತಿನ ಕಟ್ಟಡ ನಿರ್ಮಿಸಲು ಪ್ಲ್ಯಾನ್ ಹಾಕಿಕೊಳ್ಳಲಾಗಿದ್ದು, 3 ಅಂತಸ್ತಿನಲ್ಲಿ 50 ಹಾಸಿಗೆ ಇದ್ದುದ್ದನ್ನು 250 ಹಾಸಿಗೆಗಳ ಸಾಮಥ್ರ್ಯಕ್ಕೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
4ನೇ ಅಂತಸ್ತಿನಲ್ಲಿ ರಕ್ತ ಪರೀಕ್ಷೆ ಸೇರಿದಂತೆ ವಿವಿಧ ಲ್ಯಾಬ್ಗಳನ್ನು ತೆರೆಯಲು ಚಿಂತನೆ ನಡೆದಿದೆ. ಈ ಕುರಿತು ಉಪಮುಖ್ಯಮಂತ್ರಿ ಡಾ.ಜಿ.ಪರವೆÅೀಶ್ವರ್ ಹಾಗೂ ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ಅವರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮೇಯರ್ ಹೇಳಿದರು.
ವೈದ್ಯಾಧಿಕಾರಿಗಳಿಗೆ ತರಾಟೆ:
ಮೇಯರ್ ಭೇಟಿ ನೀಡಿದ ವೇಳೆ ಆಸ್ಪತ್ರೆ ಆವರಣದಲ್ಲೇ ಖಾಸಗಿ ವಾಹನಗಳನ್ನು ಪಾರ್ಕಿಂಗ್ ಮಾಡಿರುವುದನ್ನು ಕಂಡು ಸಂಪತ್ರಾಜ್ ಸಿಡಿಮಿಡಿಗೊಂಡರು.
ಬೇರೆಯವರು ಬಂದು ಮನಸ್ಸಿಗೆ ಬಂದಂತೆ ಆಸ್ಪತ್ರೆ ಆವರಣದಲ್ಲಿ ವಾಹನ ಪಾರ್ಕಿಂಗ್ ಮಾಡಿದ್ದಾರೆ. ನೀವು ಏನು ಮಾಡುತ್ತಿದ್ದೀರಿ? ಎಂದು ತರಾಟೆಗೆ ತೆಗೆದುಕೊಂಡರು.
ಅಲ್ಲಿದ್ದ ವಾಟರ್ಟ್ಯಾಂಕ್ ಸ್ವಚ್ಛಗೊಳಿಸದೆ ಇದ್ದುದನ್ನು ಕಂಡು ಸಿಬ್ಬಂದಿಯನ್ನು ಕೂಡಲೇ ಇದನ್ನು ಸ್ವಚ್ಛಪಡಿಸಿ ಶುದ್ಧ ನೀರನ್ನು ತುಂಬಿಸುವಂತೆ ಆದೇಶಿಸಿದರು.
ಆಸ್ಪತ್ರೆ ಆವರಣದಲ್ಲಿ ಪ್ಲಾಸ್ಟಿಕ್ ಬ್ಯಾನರ್ಗಳನ್ನು ತೆಗೆದು ಹಾಕುವಂತೆ ಸೂಚಿಸಿದ ಸಂಪತ್ರಾಜ್ ಔಷಧಿ ಸೇರಿದಂತೆ ಯಾವುದೇ ಮೂಲಸೌಕರ್ಯಗಳು ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಬಿಜೆಪಿ ಸದ್ದಿಲ್ಲದೆ ಕಾರ್ಯಾಚರಣೆ ಆರಂಭ