
ಕೊಲ್ಲಾಪುರ (ಪಿಟಿಐ), ಆ.31-ಕೇಂದ್ರ ಮತ್ತು ವಿವಿಧ ರಾಜ್ಯಗಳಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿರುವ ಜನ ಸಂಘರ್ಷ ಯಾತ್ರೆಗೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಪಕ್ಷದ ಧುರೀಣ ಎಂ. ಮಲ್ಲಿಕಾರ್ಜುನ ಖರ್ಗೆ ಇಂದು ಚಾಲನೆ ನೀಡಿದರು.
ಜನರಿಗೆ ನೀಡಿದ ವಾಗ್ದಾನವನ್ನು ಈಡೇರಿಸುವಲ್ಲಿ ಬಿಜೆಪಿ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿ ಕಾಂಗ್ರೆಸ್ ಆರಂಭಿಸಿರುವ ಈ ಯಾತ್ರೆಯು ಪಕ್ಷದಿಂದ ಜನರಿಗೆ ಪರ್ಯಾಯ ಆಡಳಿತದ ಬಗ್ಗೆ ಮನವರಿಕೆ ಮಾಡಿಕೊಡಲಿದೆ.
ಮಹಾರಾಷ್ಟ್ರಕ್ಕೆ ಪಕ್ಷದ ಉಸ್ತುವಾರಿ ಮಹಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಈ ಯಾತ್ರೆಗೆ ಚಾಲನೆ ನೀಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ಟೀಕಿಸಿದರು.
ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಚೌಹಾಣ್, ವಿಧಾನಸಭೆ ವಿರೋಧಪಕ್ಷದ ನಾಯಕ ರಾಧಾಕೃಷ್ಣ ವಿಖೇ ಪಾಟೀಲ್ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಜನ ಸಂಘರ್ಷ ಯಾತ್ರೆ ರಾಜ್ಯದ ವಿವಿಧ ಭಾಗಗಳಲ್ಲಿ ಸಂಚರಿಸಲಿದೆ.