ಬಾಗಲಕೋಟೆ: ಪಂಚಾಯತ ಆವರಣದಲ್ಲಿ ದಿನನಿತ್ಯ ಬೆಳಿಗ್ಗೆ ದ್ವಜಾರೋಹಣ ಮಾಡಿ ಸಂಜೆಯ ಹೊತ್ತಿಗೆ ದ್ವಜವನ್ನು ಇಳಿಸಬೇಕು. ಆದರೆ ಮುಧೋಳ ತಾಲೂಕಿನ ಶಿರೋಳ ಗ್ರಾಮ ಪಂಚಾಯತ್ ಸಿಬ್ಬಂದಿ ರಾತ್ರಿ 08 ಘಂಟೆಯಾದರೂ ದ್ವಜವನ್ನು ಇಳಿಸದೇ ರಾಷ್ಟ್ರದ್ವಜಕ್ಕೆ ಅವಮಾನ ಮಾಡಿರುವ ಘಟನೆ ನಡೆದಿದೆ.
ಈಹಿನ್ನಲೆಯಲ್ಲಿ ಶಿರೋಳ ಗ್ರಾಮಸ್ಥರು, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗ್ರಾಮ ಪಂಚಾಯತ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ತಪ್ಪತಸ್ಥ ಗ್ರಾಮಪಂಚಾಯತ ಅಭಿವೃದ್ದಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು. ನಂತರ ಈ ರೀತಿಯ ಘಟನೆ ಮರುಕಳಿಸುವುದಿಲ್ಲ ಎಂದು ಪಿ. ಡಿ. ಓ ಮನವಿ ಮಾಡಿದಾಗ ಪ್ರತಿಭಟನೆ ನಿಲ್ಲಿಸಿದ್ದಾರೆ. ಸರ್ಕಾರಿ ಕಛೇರಿಯ ಸಿಬ್ಬಂದಿಯೇ ಈ ರೀತಿ ಮಾಡಿದರೇ ಹೇಗೆ ಎಂದು ಸಾರ್ವಜನಿಕರು ಪ್ರಶ್ನಿಸಿದರು.