ನವದೆಹಲಿ: ಜಾಹೀರಾತುಗಳಿಗಾಗಿ ಸಾರ್ವಜನಿಕರ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್ ಡಿಎ ಸರ್ಕಾರ ಹಾಗೂ ಬಿಜೆಪಿ ಆಡಳಿತವಿರುವ 5 ರಾಜ್ಯಗಳಿಗೆ ನೋಟೀಸ್ ಜಾರಿ ಮಾಡಿದೆ.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್’ಡಿಎ ಸರ್ಕಾರ ಹಾಗೂ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳು ತಮ್ಮ ಜಾಹೀರಾತುಗಳಿಗಾಗಿ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಈ ಕುರಿತು ಆಡಳಿತಾರೂಢ ಪಕ್ಷಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿ ಬುರಾರಿಯ ಆಮ್ ಆದ್ಮಿ ಪಕ್ಷದ ಶಾಸಕ ಸಂಜೀವ್ ಝಾ ಅವರು ಸುಪ್ರೀಂ ಮೊರೆ ಹೋಗಿದ್ದರು.
ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಮೂರ್ತಿ ರಂಜನ್ ಗೊಗೊಯ್ ಅವರಿದ್ದ ಪೀಠ, ಮಾಹಿತಿ ಮತ್ತು ಪ್ರಸಾರ ಇಲಾಖೆ, ಬಿಜೆಪಿ ಹಾಗೂ ಬಿಜೆಪಿ ಆಡಳಿತ ನಡೆಸುತ್ತಿರುವ ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಾಂಡ್, ಛತ್ತೀಸ್ಗಢ ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ.
Supreme Court notice to Centre, BJP, six states on violation of public advertisement guidelines