ಮಠಗಳು ಕೇವಲ ಧಾರ್ಮಿಕ ಕೇಂದ್ರಗಳಾಗಿಲ್ಲ: ಅಮಿತ್​ ಶಾ

ರಾಯಚೂರು: ನಮ್ಮ ಸಂಸ್ಕೃತಿ ಹಾಗೂ ಪರಂಪರೆಯಲ್ಲಿ ಮಠಗಳು ಕೇವಲ ಧಾರ್ಮಿಕ ಕೇಂದ್ರಗಳಾಗಿಲ್ಲ. ಸಾಮಾಜಿಕ ಕಾರ್ಯಗಳನ್ನು ಸಹ ಮಾಡಿ ಜನರಿಗೆ ಅನುಕೂಲ ಮಾಡುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಹೇಳಿದರು.

ಮಂತ್ರಾಲಯದ ಶ್ರೀ ಸುಜಯೇಂದ್ರ ಆರೋಗ್ಯಾಲಯ ಉದ್ಘಾಟನೆ ಬಳಿಕ ಮಾತನಾಡಿದ ಅವರು, ಲಕ್ಷಾಂತರ ಜನರಿಗೆ ಆರೋಗ್ಯ ಸೇವೆ ನೀಡಲಿರುವ ಆರೋಗ್ಯಾಲಯ ಇದಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ ಅನುಗ್ರಹ ನುಡಿ ನುಡಿದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥರು, ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರೆ ಎಲ್ಲವೂ ಸರಿಯಾಗುತ್ತದೆ. ಈಗ ಸುಸಜ್ಜಿತ ಆರೋಗ್ಯಾಲಯ ಆರಂಭವಾಗಿದೆ ಎಂದರು.

ಸುಮಾರು 67 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಸುಸಜ್ಜಿತ ಮಿನಿ ಸ್ಪೆಷಲಿಟಿ ಆಸ್ಪತ್ರೆ ಇದಾಗಿದ್ದು, ಕಾರ್ಯಕ್ರಮದಲ್ಲಿ ಶಾಸಕ ಅರವಿಂದ ಲಿಂಬಾವಳಿ, ರಾಘವೇಂದ್ರ ‌ಮಠದ ಶ್ರೀ ಸುಭುದೇಂದ್ರ ತೀರ್ಥ ಸ್ವಾಮಿಗಳು ಹಾಜರಿದ್ದರು‌.

ಇನ್ನು ಅಮಿತ್​ ಶಾ ವೇದಿಕೆಯಲ್ಲಿ ಆಸೀನರಾಗಿದ್ದ ವೇಳೆ ಕಾಲಿನ ಮೇಲೆ ಕಾಲು ಹಾಕಿ ಕೂತಿದ್ದರಿಂದ ನೆರೆದಿದ್ದ ಕೆಲವರಲ್ಲಿ ಚರ್ಚಾವಿಷಯವಾಗಿ ಏರ್ಪಟ್ಟಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ