
ಬೆಂಗಳೂರು, ಸೆ.1-ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಯಶವಂತಪುರ ಸಂಚಾರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ.
ನೆಲಮಂಗಲ ನಿವಾಸಿ ಕಿರಣ್ (23) ಮೃತಪಟ್ಟವರು. ಇವರು ತುರುವೇಕೆರೆ ಮೂಲದವರಾಗಿದ್ದಾರೆ.
ಇಂದು ಬೆಳಗ್ಗಿನ ಜಾವ 4.45ರ ವೇಳೆಗೆ ಯಶವಂತಪುರದ ಗುರಗುಂಟೆಪಾಳ್ಯದಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಿಂದಿನ ಲಾರಿಯಲ್ಲಿದ್ದ ಕಿರಣ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂದಿನ ಲಾರಿಯ ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಯಶವಂತಪುರ ಸಂಚಾರ ಪೆÇಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.