ಮೈಸೂರು ದಸರಾ ಉತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಇದೇ 3ರಂದು ಅರಮನೆಗೆ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಗುತ್ತದೆ

ಮೈಸೂರು, ಸೆ.1-ವಿಶ್ವವಿಖ್ಯಾತಿ ಮೈಸೂರು ದಸರಾ ಉತ್ಸವದಲ್ಲಿ ಭಾಗವಹಿಸುವ ಮೊದಲ ತಂಡದ ಆನೆಗಳನ್ನು ಇದೇ 3ರಂದು ಅರಮನೆಗೆ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಗುತ್ತದೆ.
ಮೈಸೂರು ಅರಮನೆ ಮಂಡಳಿ ವತಿಯಿಂದ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಪೂಜೆ ಸಲ್ಲಿಸುವ ಮೂಲಕ ದಸರಾ ಆನೆಗಳನ್ನು ಬರಮಾಡಿಕೊಳ್ಳಲಾಗುವುದು.
ಅಂಬಾರಿ ಹೊರಲಿರುವ ಕ್ಯಾಪ್ಟನ್ ಅರ್ಜುನ ಸೇರಿದಂತೆ ಆರು ಆನೆಗಳು ಮೊದಲ ತಂಡದಲ್ಲಿ ಆಗಮಿಸಲಿವೆ.
ಹುಣಸೂರಿನ ವೀರನಹೊಸಹಳ್ಳಿಯಿಂದ ನಗರಕ್ಕೆ ಆಗಮಿಸುವ ಗಜಪಡೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ಮಂಗಳವಾದ್ಯಗಳೊಂದಿಗೆ ಬರಮಾಡಿಕೊಳ್ಳಲಾಗುತ್ತದೆ.
ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರು ಅಧ್ಯಕ್ಷತೆ ವಹಿಸುವರು. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಜರಿರುವರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ