ನಗರ ಸ್ಥಳೀಯ ಸಂಸ್ಥೆಗಳ ಫ‌ಲಿತಾಂಶ ಸೆ.3ಕ್ಕೆ 

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಿಗೆ ಶುಕ್ರವಾರ ನಡೆದ ಮತದಾನ ಶಾಂತಿಯುತವಾಗಿತ್ತು. ಮಹಾನಗರ ಪಾಲಿಕೆಗಳಿಗೆ ನಡೆದ ಮತದಾನ ಪ್ರಮಾಣ ಶೇ.53.8 ಇದ್ದರೆ, ಉಳಿದ ನಗರ ಸ್ಥಳೀಯ ಸಂಸ್ಥೆಗಳ ಮತ ಪ್ರಮಾಣ ಶೇ. 67.1 ರಷ್ಟು ದಾಖಲಾಗಿದೆ. ಸೆ.3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಮಹಾನಗರ ಪಾಲಿಕೆ ಸೇರಿದಂತೆ 21 ಜಿಲ್ಲೆಗಳ 29 ನಗರಸಭೆಗಳು, 53 ಪುರಸಭೆಗಳು ಹಾಗೂ 20 ಪಟ್ಟಣ ಪಂಚಾಯ್ತಿಗಳಿಗೆ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಶುರುವಾಯಿತು. ಕೆಲವೆಡೆ ಅಡಚಣೆ, ಸಣ್ಣ ಪುಟ್ಟ ಗೊಂದಲ, ಸಮಸ್ಯೆಗಳನ್ನು ಹೊರತುಪಡಿದರೆ ಎಲ್ಲಿಯೂ ಅಹಿತಕರ ಘಟನೆ ನಡೆದಿರುವ ಬಗ್ಗೆ ವರದಿಯಾಗಿಲ್ಲ.

ಮತಕೇಂದ್ರ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿತ್ತು. ರಾಜ್ಯದ ಬಹುತೇಕ ಸ್ಥಳೀಯ ಸಂಸ್ಥೆಗಳಿಗೆ ಶುಕ್ರವಾರ ನಡೆದ ಮತದಾನ ಶಾಂತಿಯುತವಾಗಿತ್ತು. ಯಾವುದೇ ಲೋಪದೋಷಗಳು ಉಂಟಾಗಿರುವ ಬಗ್ಗೆ ವರದಿಯಾಗಿಲ್ಲ.

ಒಂದೊಮ್ಮೆ ಯಾವುದೇ ವಾರ್ಡ್‌ ನಲ್ಲಿ ಮರು ಮತದಾನ ಅಗತ್ಯವಿದ್ದರೆ ಭಾನುವಾರ ಮರು ಮತದಾನ ನಡೆಸಲಾಗುವುದು ಎಂದು ಹೇಳಿದ್ದಾರೆ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ