ಪ್ರಧಾನಮಂತ್ರಿ ಹತ್ಯೆಗೆ ಸಂಚು ಪ್ರಕರಣ: ಸಂಚುಕೋರರ ಜಾಲವನ್ನು ಸಮಗ್ರವಾಗಿ ಪತ್ತೆಹಚ್ಚಿ ಬಹಿರಂಗಪಡಿಸುವಂತೆ ಸಚಿವ ಯು.ಟಿ.ಖಾದರ್ ಆಗ್ರಹ

ಬೆಂಗಳೂರು, ಸೆ.1-ಪ್ರಧಾನಮಂತ್ರಿ ಹತ್ಯೆಗೆ ಸಂಚು ನಡೆದಿದೆ ಎಂದು ಪ್ರತಿ ಮೂರು ತಿಂಗಳಿಗೊಮ್ಮೆ ಕಾರ್ಯಾಚರಣೆ ನಡೆಸುವ ಬದಲು ಸಂಚುಕೋರರ ಜಾಲವನ್ನು ಸಮಗ್ರವಾಗಿ ಪತ್ತೆಹಚ್ಚಿ ಬಹಿರಂಗಪಡಿಸುವಂತೆ ವಸತಿ ಸಚಿವ ಯು.ಟಿ.ಖಾದರ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಪ್ರಧಾನಿ ಹತ್ಯೆ ಮಾಡುವ ಸಂಚು ನಡೆಸುವುದು ಸಾಮಾನ್ಯದ ವಿಷಯವಲ್ಲ. ಇದು ಅತ್ಯಂತ ಖಂಡನೀಯ. ಯಾರೇ ಆಗಿದ್ದರೂ ಅವರನ್ನು ಬಂಧಿಸಿ ವಿಚಾರಣೆ ನಡೆಸಲೇಬೇಕು. ಆರೋಪಿಗಳು ಯಾರು ಎಂಬುದನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು. ಸಂಚಿನ ಸೂತ್ರಧಾರನನ್ನು ಬಂಧಿಸಿ ದೇಶದ ಮುಂದೆ ಬಹಿರಂಗಪಡಿಸಿ. ಆತನನ್ನು ದೇಶದ್ರೋಹಿ ಎಂದು ಘೋಷಣೆ ಮಾಡಿ ಕಠಿಣ ಶಿಕ್ಷೆ ನೀಡಿ. ಅದರ ಬದಲಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ಪ್ರಧಾನಿ ಹತ್ಯೆಗೆ ಸಂಚು ನಡೆದಿದೆ ಎಂದು ವರದಿಯಾಗುತ್ತಿದೆ.
ದೇಶದ ಪ್ರಧಾನಿ ಹತ್ಯೆಗೆ ಸಂಚು ನಡೆಸಲಾಗುತ್ತಿದೆ ಎಂದರೆ ಇನ್ನು ಜನ ಸಾಮಾನ್ಯರ ಕತೆ ಏನು? ಇದಕ್ಕೆ ಸೂಕ್ತ ಪರಿಹಾರ ಕಂಡು ಹಿಡಿಯಬೇಕೆಂದು ಅವರು ಆಗ್ರಹಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ