ಬೆಂಗಳೂರು,ಸೆ.2-ನಾಯಕರ ಪರಸ್ಪರ ಕಿತ್ತಾಟ, ಟಿಕೆಟ್ ಆಕಾಂಕ್ಷಿಗಳ ಲಾಭಿ, ಮುನಿಸು, ಅಸಮಾಧಾನಗಳ ನಡುವೆ ಲೋಕಸಭೆ ಚುನಾವಣೆಗೆ ಕಾರ್ಯ ತಂತ್ರ ರೂಪಿಸಲು ಕಾಂಗ್ರೆಸ್ 2ನೇ ದಿನವಾದ ಭಾನವಾರವೂ ಸರಣಿ ಸಭೆ ನಡೆಸಿತು.
ಒಂದೆಡೆ ಜಾರಕಿ ಹೊಳಿ ಸಹೋದರರು ಹಾಗೂ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ನಡೆಯುತ್ತಿರುವ ಜಂಘೀ ಕುಸ್ತಿ, ತಮಗೆ ಟಿಕೆಟ್ ನೀಡುವಂತೆ ನಾಯಕರ ಮೇಲೆ ಟಿಕೆಟ್ ಆಕಾಂಕ್ಷಿಗಳ ಸತತ ಒತ್ತಡ ತಮ್ಮ ನಾಯಕರಿಗೆ ಟಿಕೆಟ್ ನೀಡಬೇಕೆಂದು ಬೆಂಬಲಿಗರ ಒತ್ತಾಯದ ನಡುವೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತಂತೆ ಮಾಹಿತಿ ಪಡೆಯಲಾಯಿತು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಭಾನುವಾರ ಮತ್ತೊಂದು ಸಭೆ ನಡೆಯಿತು.