ಶಾಸಕಿ ಲಕ್ಷ್ಮಿ ಹೆಬಾಳ್ಕರ್ ವಿರುದ್ಧ ಆರೋಪಕ್ಕೆ ಕ್ಷಮೆಯಾಚಿಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯ

ಬೆಂಗಳೂರು,ಸೆ.2- ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬಾಳ್ಕರ್ ಅವರ ಮೇಲೆ ಇಲ್ಲಸಲ್ಲದ ಹೇಳಿಕೆ ನೀಡಿ ಅಸಂಬದ್ಧವಾಗಿ ಮಾತನಾಡುವುದನ್ನು ಕೈಬಿಡಬೇಕು ಹಾಗೂ ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭಾದ ಬಿ.ಎಸ್.ಸಚ್ಚಿದಾನಂದ ಮೂರ್ತಿ ಒತ್ತಾಯಿಸಿದ್ದಾರೆ.

ಒಬ್ಬ ಹೆಣ್ಣು ಮಗಳ ಏಳಿಗೆಯನ್ನು ಸಹಿಸಲಾರದೆ ಇವರು ಅವರ ಮೇಲೆ ಆರೋಪವನ್ನು ಹೊರಿಸುತ್ತಿದ್ದಾರೆ. ಇವರಿಗೆ ಸಚಿವ ಸ್ಥಾನದಲ್ಲಿ ಮುಂದುವರೆಯಲ್ಲು ಯಾವ ನೈತಿಕತೆಯೂ ಇಲ್ಲ. ಒಬ್ಬ ಜನಪ್ರತಿನಿಧಿಯ ಬಗ್ಗೆ ಮಾತನಾಡುವುದು ಆ ಕ್ಷೇತ್ರದ ಜನರಿಗೆ ಮಾಡಿದ ಅವಮಾನ. ಇದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಥವರಿಂದ ಮಹಿಳಾ ಸಮುದಾಯದ ಯಾವ ನಿರೀಕ್ಷೆಯನ್ನು ಇಟ್ಟುಕೊಳ್ಳಬಹುದು, ಇವರ ನಡುವಳಿಕೆ ಮಹಿಳಾ ಸಮುದಾಯಕ್ಕೆ ಮಾಡಿದ ಘೋರ ಅಪಮಾನ. ಇಂಥ ಮಂತ್ರಿಗಳು ಸಂಪುಟದಲ್ಲಿ ಇರಬೇಕೆ ಎಂದು ಪ್ರಶ್ನಿಸಿದ್ದಾರೆ.
ಇದೆಲ್ಲವನ್ನು ಇಲ್ಲಿಗೆ ನಿಲ್ಲಿಸಿ ಸಚಿವರು ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ