ಗುಂಟೂರು: ಮುಖ್ಯ ಪೇದೆಯೊಬ್ಬರು ಪೊಲೀಸ್ ಠಾಣೆಯಲ್ಲೇ ಮಹಿಳೆಗೆ ಚಪ್ಪಲಿಯಿಂದ ಥಳಿಸಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ.
ಪೊಲೀಸ್ ಮುಖ್ಯ ಪೇದೆ ವೆಂಕೆಟೇಶ್ ರಾವ್ ಕೆಲ ಮಹಿಳೆಯರನ್ನು ವಿಚಾರಣೆಗೆ ಎಂದು ಪೊಲೀಸ್ ಠಾಣೆಗೆ ಕರೆದ್ಯೊಯ್ದಿದ್ದಾರೆ. ರಾತ್ರಿ ಸಮಯದಲ್ಲಿ ಕುಡಿದು ವೆಂಕೆಟೇಶ್ ರಾವ್ ಮಹಿಳೆಯರ ಮೇಲೆ ದೌರ್ಜನ್ಯ ತೋರಿದ್ದಾರೆ. ಇದನ್ನು ಪ್ರಶ್ನಿಸಿದ ಮಹಿಳೆಯೊಬ್ಬರಿಗೆ ಚಪ್ಪಲಿಯಿಂದ ಥಳಿಸಿದ್ದಾರೆ ಎನ್ನಲಾಗಿದೆ.
ಇನ್ನು ಹೆಡ್ ಕಾನ್ಸ್ಟೇಬಲ್ ಮಹಿಳೆಗೆ ಚಪ್ಪಲಿಯಿಂದ ಥಳಿಸುತ್ತಿರುವ ವೇಳೆ ಕೆಲವರು ಫೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಘಟನೆ ಪೊಲೀಸ್ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಪೊಲೀಸ್ ಮುಖ್ಯ ಪೇದೆ ಮೇಲೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.