ಬೆಂಗಳೂರು: ಸ್ಥಳೀಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ವಾರ್ಡ್‌ಗಳಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಿದೆ. ಆದರೆ ಯಾವ ಪಕ್ಷವೂ ಸ್ಪಷ್ಟ ಬಹುಮತ ಪಡೆದುಕೊಂಡಿಲ್ಲ. ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಯೇ ಗೆಲ್ಲುತ್ತದೆ ಎನ್ನುತ್ತಿದ್ದರು. ಆದರೆ ಈ ಬಾರಿ ನಾವು ಗೆದ್ದಿದ್ದೇವೆ. ಕೆಲವು ಕಡೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಇದರಲ್ಲೂ ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಹೇಳಿದ್ದಾರೆ.
ನಗರ ವೀಕ್ಷಣೆಗು ಮುನ್ನ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದಲ್ಲಿ ಕಳೆದ ಬಾರಿಯು ಐದು ಸ್ಥಾನ ಗೆದ್ದಿದ್ದೆವು. ಈ ಬಾರಿಯೂ ಅಷ್ಟೆ ಸ್ಥಾನ ಬಂದಿದೆ. ಬಿಜೆಪಿಗೆ ಅವಕಾಶ ಕೊಟ್ಟಿಲ್ಲ. ಜೆಡಿಎಸ್ ಗೆದ್ದಿರುವುದರಿಂದ ಹೊಂದಾಣಿಕೆಯಲ್ಲಿ ಮುಂದೆ ಹೋಗಲಿದ್ದೇವೆ.
ಚುನಾವಣೆಗು ಮುನ್ನ ಹೋಂದಾಣಿಕೆ ಮಾಡಿಕೊಂಡಿರಲಿಲ್ಲ ಎಂದು ಸ್ಪಷ್ಟ ಪಡಿಸಿದರು.
ಮೇಯರ್ ಆಯ್ಕೆ ವಿಚಾರದಲ್ಲಿ ಎಲ್ಲ ಕಾರ್ಪೋರೇಟ್ ಸದಸ್ಯ ಜೊತೆ ಚರ್ಚಿಸಿ ಬಳಿಕ ನಿರ್ಧರಿಸಲಾಗುವುದು ಎಂದು ಹೇಳಿದರು.