ಬೆಳಗಾವಿ, ಸೆ.3- ಜಿಲ್ಲೆಯ ಕೊಣ್ಣೂರು ಪುರಸಭೆಯಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.
ಒಟ್ಟು 23 ವಾರ್ಡ್ಗಳ ಪೈಕಿ 17 ವಾರ್ಡ್ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳೆ ಗೆಲುವು ಸಾಧಿಸಿದ್ದಾರೆ. ಈಗಾಗಲೇ ಹಾಲಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿತ ಆರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರು.
ಕಣದಲ್ಲಿದ್ದ ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು ತೀವ್ರ ಹಿನ್ನಡೆ ಅನುಭವಿಸಿದ್ದಾರೆ.
ಖಾನಾಪುರ ಪಟ್ಟಣ ಪಂಚಾಯ್ತಿಯು ಪಕ್ಷೇತರರ ಪಾಲಾಗಿದೆ. ಒಟ್ಟು 23 ಸದಸ್ಯರಲ್ಲಿ ಎಲ್ಲಾ ವಾರ್ಡ್ಗಳಲ್ಲೂ ಪಕ್ಷೇತರ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದಾರೆ. ಕಣದಲ್ಲಿದ್ದ ಕಾಂಗ್ರೆಸ್-ಜೆಡಿಎಸ್ ಹಾಗೂ ಬಿಜೆಪಿ ಅಭ್ಯರ್ಥಿಗಳಿಗೆ ಭಾರೀ ಮುಖಭಂಗವಾಗಿದೆ.
ಗೋಕಾಕ್: ಶಾಸಕ ರಮೇಶ್ ಜಾರಕಿಹೊಳಿ ಪ್ರತಿನಿಧಿಸುವ ಗೋಕಾಕ್ ನಗರಸಭೆ ಪಕ್ಷೇತರರ ಪಾಲಾಗಿದೆ. ಒಟ್ಟು 31 ಸ್ಥಾನಗಳಲ್ಲಿ ಎಲ್ಲಾ ವಾರ್ಡ್ಗಳಲ್ಲೂ ಪಕ್ಷೇತರ ಅಭ್ಯರ್ಥಿಗಳೇ ಗೆಲುವಿನ ನಗೆ ಬೀರಿದ್ದಾರೆ.