ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತ

 

ಬಾಗಲಕೋಟೆ,ಸೆ.3-ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತ ಪಡೆಯುವ ಮೂಲಕ ಸ್ಪಷ್ಟ ಜನಾದೇಶದೊಂದಿಗೆ ಸತತ 4ನೇ ಬಾರಿಗೆ ಅಧಿಕಾರ ಹಿಡಿದಿದೆ.
ಒಟ್ಟು 31 ವಾರ್ಡ್‍ಗಳ ಪೈಕಿ 29 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದ್ದರೆ, ಕಾಂಗ್ರೆಸ್ 5 ಹಾಗೂ ಪಕ್ಷೇತರರು ಒಂದು ವಾರ್ಡ್‍ನಲ್ಲಿ ಗೆಲವು ಸಾಧಿಸಿದ್ದಾರೆ.
ಶಾಸಕ ವೀರಣ್ಣ ಚರಂತಿ ಮಠ್ ಹಾಗೂ ಮಾಜಿ ಸಚಿವ ಎಚ್.ವೈಘಿ.ಮೇಟಿ ಪ್ರತಿಷ್ಠೆಯ ಕಣವಾಗಿದ್ದ ಈ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿದೆ.
ಈ ಹಿಂದೆ ನಡೆದ ಮೂರು ಚುನಾವಣೆಯಲ್ಲೂ ಬಿಜೆಪಿ ಗೆಲುವಿನ ನಗೆ ಬೀರಿತ್ತುಘಿ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ