ನಗರಸಭೆಯ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತ

ಉಡುಪಿ,ಸೆ.3-ನಗರಸಭೆಯ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತ ಪಡೆಯುವ ಮೂಲಕ ಉಡುಪಿಯಲ್ಲಿ ಮತ್ತೆ ಕಮಲ ಗೆಲುವಿನ ನಗೆ ಬೀರಿದೆ.
ನಗರಸಭೆಯ ಒಟ್ಟು 35 ವಾರ್ಡ್‍ಗಳ ಪೈಕಿ ಬಿಜೆಪಿ 31 ಸ್ಥಾನಗಳನ್ನು ಪಡೆಯುವ ಮೂಲಕ ಇದು ಕಮಲದ ಭದ್ರ ಕೋಟೆ ಎಂಬುದನ್ನು ಸಾಬೀತು ಮಾಡಿದೆ. ಕಾಂಗ್ರೆಸ್ ಕೇವಲ 4 ಸ್ಥಾನಗಳಲ್ಲಿ ಗೆದ್ದಿದೆ.
ಶಾಸಕ ರಘುಪತಿ ಭಟ್ ಮತ್ತು ಮಾಜಿ ಶಾಸಕ ಪ್ರಮೋದ್ ಮದ್ವರಾಜ್ ನಡುವಿನ ಜಿದ್ದಾಜಿದ್ದಿನ ಹೋರಾಟದಲ್ಲಿ ಬಿಜೆಪಿ ನಗರಸಭೆಯನ್ನು ಭಾರೀ ಬಹುಮತ ಪಡೆಯುವ ಮೂಲಕ ತನ್ನ ತೆಕ್ಕೆಗೆ ಪಡೆದುಕೊಂಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ