
ಬಳ್ಳಾರಿ, ಸೆ.3- ಗಣಿನಾಡು ಬಳ್ಳಾರಿ ಜಿಲ್ಲೆಯ ಕುಡುತಿನಿ ಮತ್ತು ಕೊತ್ತೂರು ಪಟ್ಟಣ ಪಂಚಾಯ್ತಿಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ.
ಕುಡುತಿನಿಯ 19 ಸ್ಥಾನಗಳಲ್ಲಿ ಕಾಂಗ್ರೆಸ್ 11 ಸ್ಥಾನಗಳನ್ನು ಗೆದ್ದಿದ್ದು, ಬಿಜೆಪಿ 8ರಲ್ಲಿ ಜಯಗಳಿಸಿದೆ. ಕೊತ್ತೂರು ಪಟ್ಟಣ ಪಂಚಾಯ್ತಿಯ 20 ಸೀಟುಗಳಲ್ಲಿ ಕಾಂಗ್ರೆಸ್ 9ರಲ್ಲಿ ಜಯ ಸಾಧಿಸಿದ್ದು, ಬಿಜೆಪಿ 8 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಪಕ್ಷೇತರರು ಮೂರು ಸ್ಥಾನಗಳನ್ನು ಗೆದ್ದಿದ್ದು, ಅದರಲ್ಲಿ ಕಾಂಗ್ರೆಸ್ ಬೆಂಬಲಿತರಾಗಿರುವುದರಿಂದ ಕಾಂಗ್ರೆಸ್ ಪಕ್ಷವೇ ಅಧಿಕಾರ ಹಿಡಿಯಲಿದೆ ಎಂದು ಹೇಳಲಾಗುತ್ತಿದೆ.