ದಾವಣಗೆರೆ, ಸೆ.3- ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಫಲಿತಾಂಶ ಪ್ರಕಟವಾಗಿದ್ದು, ಹೊನ್ನಾಳಿ ಹಾಗೂ ಜಗಳೂರು ಪಟ್ಟಣ ಪಂಚಾಯ್ತಿಗಳಲ್ಲಿ ಭಾರತೀಯ ಜನತಾ ಪಕ್ಷ ಪೂರ್ಣ ಬಹುಮತ ಪಡೆದಿವೆ.
ಚನ್ನಗಿರಿ ಪುರಸಭೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ತಲಾ 10 ಸ್ಥಾನ ಪಡೆದರೆ ಜೆಡಿಎಸ್ ಎರಡು ಸ್ಥಾನ ಪಡೆದಿದೆ.
ಜಗಳೂರು ಪಟ್ಟಣ ಪಂಚಾಯ್ತಿಯಲ್ಲಿ ಬಿಜೆಪಿ 11, ಕಾಂಗ್ರೆಸ್ 5, ಜೆಡಿಎಸ್ನ ಇಬ್ಬರು ಗೆಲುವು ಸಾಧಿಸಿದ್ದಾರೆ.
ಹೊನ್ನಾಳಿ ಪಟ್ಟಣ ಪಂಚಾಯ್ತಿಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಅಧಿಕಾರ ಗದ್ದುಗೆ ಹಿಡಿದಿದೆ. ಒಟ್ಟು 18 ವಾರ್ಡ್ಗಳ ಪೈಕಿ ಬಿಜೆಪಿ 10 ವಾರ್ಡ್ಗಳಲ್ಲಿ ಗೆಲ್ಲುವ ಮೂಲಕ ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ.
ಕಾಂಗ್ರೆಸ್ 5 ಹಾಗೂ ಪಕ್ಷೇತರರು ಮೂರು ವಾರ್ಡ್ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಹಾಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಡಿ.ಜಿ.ಶಾಂತನಗೌಡ ನಡುವಿನ ಜಿದ್ದಾಜಿದ್ದಿನ ಕುರುಕ್ಷೇತ್ರದಲ್ಲಿ ಕಮಲ ಅರಳಿದೆ.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತುಘಿ. ಶತಾಯಗತಾಯ ಕಾಂಗ್ರೆಸ್ ಪಟ್ಟಣ ಪಂಚಾಯ್ತಿಯನ್ನು ಉಳಿಸಿಕೊಳ್ಳಲು ನಡೆಸಿದ ಪ್ರಯತ್ನ ಫÀಲ ಕೊಟ್ಟಿಲ್ಲ.
ಕಳೆದ ಬಾರಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಿದ್ದರೂ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಪಕ್ಷೇತರ ಬೆಂಬಲ ಪಡೆದು ಕಾಂಗ್ರೆಸ್ ಅಧಿಕಾರ ಹಿಡಿದಿತ್ತುಘಿ.