ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರ ಪ್ರಾಬಲ್ಯ ಇರುವ ಗದಗ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಈ ಬಾರಿ ಬಿಜೆಪಿ ಅತ್ಯಂತ ಪ್ರಬಲ ಪೈಪೋಟಿ

ಗದಗ, ಸೆ.3- ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರ ಪ್ರಾಬಲ್ಯ ಇರುವ ಗದಗ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಈ ಬಾರಿ ಬಿಜೆಪಿ ಅತ್ಯಂತ ಪ್ರಬಲ ಪೈಪೋಟಿ ನೀಡಿದ್ದು, ಕಾಂಗ್ರೆಸ್‍ನ ನಿದ್ದೆಗೆಡಿಸಿದೆ.
ಜಿಲ್ಲೆಯಲ್ಲಿರುವ ಒಟ್ಟು 6 ಸ್ಥಳೀಯ ಸಂಸ್ಥೆಗಳ ಪೈಕಿ ಕಾಂಗ್ರೆಸ್ 3ರಲ್ಲಿ ಹಾಗೂ ಬಿಜೆಪಿ 2ರಲ್ಲಿ ಅಧಿಕಾರ ಹಿಡಿದಿದ್ದು, ಒಂದು ಅತಂತ್ರವಾಗಿದೆ. ಒಟ್ಟು 123 ಸ್ಥಾನಗಳ ಪೈಕಿ ಕಾಂಗ್ರೆಸ್ 57 ಸ್ಥಾನಗಳನ್ನು, ಬಿಜೆಪಿ 54 ಸ್ಥಾನಗಳನ್ನು, ಜೆಡಿಎಸ್ 2 ಸ್ಥಾನಗಳನ್ನು ಗೆದಿದ್ದರೆ. ಪಕ್ಷೇತರರು 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಎಚ್.ಕೆ.ಪಾಟೀಲ್ ಅವರಿಗೆ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದು, ಪಕ್ಷದ ಚಟುವಟಿಕೆಗಳಿಂದ ದೂರ ಸರಿದಿದ್ದಾರೆ. ಅದರ ಬೆನ್ನಲ್ಲೇ ಬಿಜೆಪಿ ಕಳೆದ ಚುನಾವಣೆಗಿಂತಲೂ ಹೆಚ್ಚು ಸ್ಥಾನಗಳಿಸಿ ಕಾಂಗ್ರೆಸ್‍ಗೆ ಪೈಪೆÇೀಟಿ ನೀಡಿದೆ.
ರೋಣ ಪುರಸಭೆಯ 23 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 15ರಲ್ಲಿ ಜಯಗಳಿಸಿ ಅಧಿಕಾರ ಹಿಡಿದರೆ, ಬಿಜೆಪಿ 7 ಕ್ಷೇತ್ರಗಳಲ್ಲಿ ಗೆದ್ದಿದೆ. ಪಕ್ಷೇತರರು ಒಂದು ಸ್ಥಾನದಲ್ಲಿ ಗೆದಿದ್ದಾರೆ.

ಗಜೇಂದ್ರಗಡ ಪುರಸಭೆಯ 23 ಕ್ಷೇತ್ರಗಳಲ್ಲಿ ಬಿಜೆಪಿ 18 ಕ್ಷೇತ್ರದಲ್ಲಿ ಗೆದ್ದು ಅಧಿಕಾರ ಹಿಡಿದರೆ, ಕಾಂಗ್ರೆಸ್ 5ಕ್ಕೆ ತೃಪ್ತಿಪಟ್ಟುಕೊಂಡಿದೆ. ಲಕ್ಷ್ಮೇಶ್ವರ ಪುರಸಭೆಯ 23 ಕ್ಷೇತ್ರಗಳಲ್ಲಿ ಕಾಂಗ್ರೆಸ್ 9, ಬಿಜೆಪಿ 7 ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಜೆಡಿಎಸ್ ಎರಡರಲ್ಲಿ ಜಯಸಾಧಿಸಿದೆ.
ಪಕ್ಷೇತರರು ಐದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ರಾಜ್ಯಮಟ್ಟದಲ್ಲಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಕಾಂಗ್ರೆಸ್ ಲಕ್ಷ್ಮೀಶ್ವರ ಪುರಸಭೆಯಲ್ಲಿ ಮೈತ್ರಿ ಮಾಡಿಕೊಂಡರೂ ಅಧಿಕಾರ ಹಿಡಿಯಲು ಸಾಧ್ಯವಾಗುವುದಿಲ್ಲ. ಬದಲಾಗಿ ಪಕ್ಷೇತರರ ಬೆಂಬಲ ಅನಿವಾರ್ಯವಾಗಿದೆ.
ನೀರಗಲ್ ಪಟ್ಟಣ ಪಂಚಾಯ್ತಿಯಲ್ಲಿ ಕಾಂಗ್ರೆಸ್ ವಿಜೃಂಭಿಸಿದ್ದು, ಒಟ್ಟು 17 ಕ್ಷೇತ್ರಗಳಲ್ಲಿ 12ರಲ್ಲಿ ಜಯಗಳಿಸಿದೆ. ಬಿಜೆಪಿ 3ರಕ್ಕೆ ತೃಪ್ತಿಪಟ್ಟುಕೊಂಡರೆ, ಪಕ್ಷೇತರರು ಎರಡಲ್ಲಿ ಜಯಗಳಿಸಿದ್ದಾರೆ.
ಮುಳಗುಂದ ಪಟ್ಟಣ ಪಂಚಾಯ್ತಿಯಲ್ಲಿ ಕಾಂಗ್ರೆಸ್ ಮತ್ತೆ ವಿಜೃಂಭವಿಸಿದ್ದು, 19 ಕ್ಷೇತ್ರಗಳ ಪೈಕಿ 15ರಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ 3 ಹಾಗೂ ಪಕ್ಷೇತರರು ಒಂದು ಸ್ಥಾನ ಗೆದ್ದು ವಿರೋಧ ಪಕ್ಷದ ಅರ್ಹತೆಯನ್ನೂ ಕಳೆದುಕೊಂಡಿದ್ದಾರೆ.
ಶಿರಹಟ್ಟಿ ಪಟ್ಟಣ ಪಂಚಾಯ್ತಿಯ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್ 10ರಲ್ಲಿ ಜಯಗಳಿಸಿ ಅಧಿಕಾರ ಹಿಡಿದರೆ, ಬಿಜೆಪಿ 7ರಲ್ಲಿ, ಪಕ್ಷೇತರರು ಒಂದು ಕ್ಷೇತ್ರದಲ್ಲಿ ಅಧಿಕಾರ ಹಿಡಿದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ