ಹಾಸನ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಮೆರೆದಿದೆ

ಹಾಸನ,ಸೆ.3- ಹಾಸನ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಮೆರೆದಿದೆ.
ಹಾಸನ- ಅರಸೀಕೆರೆ ನಗರಸಭೆ, ಚನ್ನರಾಯಪಟ್ಟಣ, ಹೊಳೆನರಸೀಪುರ ಹಾಗೂ ಸಕಲೇಶಪುರ ಪುರಸಭೆಗಳು ಜೆಡಿಎಸ್ ಪಾಲಾಗಿವೆ.
ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ಪುರಸಭೆಯ 23 ಸ್ಥಾನಗಳಲ್ಲಿ ಜೆಡಿಎಸ್ 15 ಸ್ಥಾನಗಳಲ್ಲಿ ಜಯಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬೇಕಾಗಿರುವ ಬಹುಮತವನ್ನು ಗಳಿಸಿದೆ. ಕಾಂಗ್ರೆಸ್ ಪಕ್ಷ 8 ಸ್ಥಾನಗಳಲ್ಲಿ ಜಯಗಳಿಸಿದೆ.

ಹೊಳೆನರಸೀಪುರ: ಹೊಳೆ ನರಸೀಪುರ ಪುರಸಭೆಯ ಎಲ್ಲಾ 23 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಜೆಡಿಎಸ್ ಹೊಸ ದಾಖಲೆ ನಿರ್ಮಿಸಿದೆ.
ಸಕಲೇಶಪುರ: ಸಕಲೇಶಪುರ ಪುರಸಭೆಯ 23 ಸ್ಥಾನಗಳಲ್ಲಿ ಜೆಡಿಎಸ್ 14 ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಅಧಿಕಾರಕ್ಕೆ ಬರಲಿದೆ. ಬಿಜೆಪಿ 2 , ಕಾಂಗ್ರೆಸ್ 4 ಹಾಗೂ ಪಕ್ಷೇತರರು 3 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.
ಹಾಸನ: ಹಾಸನ ನಗರಸಭೆಯ 35 ಸ್ಥಾನಗಳ ಪೈಕಿ ಜೆಡಿಎಸ್ 17 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಬಿಜೆಪಿ 13, ಕಾಂಗ್ರೆಸ್ 2 ಹಾಗೂ ಪಕ್ಷೇತರರು 03 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.
ಇದುವರೆಗೆ 33 ಸ್ಥಾನಗಳಫಲಿತಾಂಶ ಪ್ರಕಟವಾಗಿದ್ದುಘಿ, ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದೆ.
ಅರಸೀಕೆರೆ: ಅರಸೀಕೆರೆಯ ನಗರಸಭೆಯ 31 ಸ್ಥಾನಗಳ ಜೆಡಿಎಸ್ 22 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಬಹುಮತಗಳಿಸಿದೆ. ಬಿಜೆಪಿ 05, ಕಾಂಗ್ರೆಸ್ 01, ಪಕ್ಷೇತರ 03 ಸ್ಥಾನಗಳಲ್ಲಿ ಗೆದ್ದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ