ಹೊಳೆನರಸೀಪುರದ ಪುರಸಭೆಯಲ್ಲಿ ಜೆಡಿಎಸ್ ಬೆಂಬಲಿತ 23 ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ದಾಖಲೆ

ಹೊಳೆನರಸೀಪುರ,ಸೆ.3- ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣನವರ ಸ್ವಕ್ಷೇತ್ರ ಹೊಳೆನರಸೀಪುರದ ಪುರಸಭೆಯಲ್ಲಿ ಜೆಡಿಎಸ್ ಬೆಂಬಲಿತ 23 ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.
ಜೆಡಿಎಸ್ ಬೆಂಬಲಿತ 23 ಅಭ್ಯರ್ಥಿಗಳು ಎಲ್ಲಾ ವಾರ್ಡ್‍ಗಳಲ್ಲಿ ಗೆಲುವು ಸಾಧಿಸಿದ್ದರೆ, ಕಣದಲ್ಲಿದ್ದ ಕಾಂಗ್ರೆಸ್-ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳಿಗೆ ತೀವ್ರ ಮುಖಭಂಗವಾಗಿದೆ.
ಈ ಮೂಲಕ ಪುರಸಭೆಯಲ್ಲೂ ರೇವಣ್ಣನ ಪ್ರಭಾವ ಬೀರಿರುವುದು ಸ್ಪಷ್ಟವಾಗಿದೆ. ರಾಜ್ಯದ ಯಾವುದೇ ಪುರಸಭೆಯಲ್ಲಿ ಎಲ್ಲ ವಾರ್ಡ್‍ಗಳಲ್ಲಿ ಒಂದೇ ಪಕ್ಷದ ಅಭ್ಯರ್ಥಿಗಳು ಗೆದ್ದಿರುವ ನಿದರ್ಶನಗಳಿಲ್ಲ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ