
ತುಮಕೂರು, ಸೆ.3- ತುಮಕೂರು ನಗರವನ್ನು ಪ್ರಧಾನಮಂತ್ರಿಯವರ ಸ್ಮಾರ್ಟ್‍ಸಿಟಿ ಯೋಜನೆಗೆ ಆಯ್ಕೆ ಮಾಡಿಕೊಂಡಿದ್ದು, ಈ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹೆಚ್ಚಿನ ಅನುದಾನ ಕೇಂದ್ರದಿಂದ ಹರಿದು ಬರಲಿದೆ. ಆದ್ದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಬಿಜೆಪಿಯನ್ನು ಬೆಂಬಲಿಸಬೇಕೆಂದು ಬಿಜೆಪಿ ಮುಖಂಡ ಪ್ರಭಾಕರ್ ಮನವಿ ಮಾಡಿದ್ದಾರೆ.
ಮಹಾನಗರ ಪಾಲಿಕೆ Àಲಿತಾಂಶ ಅತಂತ್ರವಾಗಿದ್ದು, ಪಕ್ಷೇತರ ಮೂವರು ಈಗಾಗಲೇ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಆದರೂ ಅಧಿಕಾರಕ್ಕೆ ಬರಲು ಇನ್ನೂ ಕೆಲವು ಸದಸ್ಯರ ಬೆಂಬಲ ಅಗತ್ಯವಿದೆ. ಆದ್ದರಿಂದ ಜೆಡಿಎಸ್ ಮತ್ತು ಕಾಂಗ್ರೆಸ್‍ನ ಸದಸ್ಯರು ಬೆಂಬಲ ನೀಡಬೇಕು ಎಂದು ಅವರು ಕೋರಿಕೊಂಡಿದ್ದಾರೆ.
ಮಾಜಿ ಶಾಸಕ ಬಿಜೆಪಿಯ ಸುರೇಶ್ ಗೌಡ, ಶಾಸಕ ಜ್ಯೋತಿಗಣೇಶ್, ಹಿರಿಯ ಮುಖಂಡ ವಿ.ಸೋಮಣ್ಣ ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಸೆಳೆಯುವ ಕಾರ್ಯದಲ್ಲಿ ನಿರತರಾಗಿದ್ದುಘಿ, ಆಪರೇಷನ್ ಕಮಲದ ಮೂಲಕ ಪಾಲಿಕೆಯ ಗದ್ದುಗೆ ಏರಲು ಬಿಜೆಪಿ ಎಲ್ಲ ಸಿದ್ದತೆಗಳನ್ನು ಕೈಗೊಂಡಿದೆ.
ಈ ಮೂಲಕ ಲೋಕಸಭೆ ಚುನಾವಣೆಯಲ್ಲೂ ಕ್ಷೇತ್ರವನ್ನು ಬಿಜೆಪಿ ತೆಕ್ಕೆಗೆ ಸೆಳೆಯಲು ಪ್ರಯತ್ನ ನಡೆಸುತ್ತಿದೆ.