ದುಬೈ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಮುಖಭಂಗದ ನಡುವೆಯೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ಬಿಡುಗಡೆ ಮಾಡಿರುವ ರ್ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 937 ಅಂಕಗಳನ್ನು ಸಂಪಾದಿಸುವ ಮೂಲಕ ಮತ್ತೆ ಅಗ್ರಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಇನ್ನು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೊದಲ ಇನ್ನಿಂಗ್ಸ್ ನಲ್ಲಿ 46 ಮತ್ತು ಎರಡನೇ ಇನ್ನಿಂಗ್ಸ್ ನಲ್ಲಿ 58 ರನ್ ಬಾರಿಸಿದ್ದು, ಒಟ್ಟಾರೆ 8 ಇನ್ನಿಂಗ್ಸ್ ಗಳ ಪೈಕಿ 544 ರನ್ ಗಳನ್ನು ಪೇರಿಸಿದ್ದಾರೆ.
ಕ್ರಿಕೆಟ್ ದಿಗ್ಗಜ ಡಾನ್ ಬ್ರಾಡ್ಮನ್ 961 ಅಂಕ ಗಳಿಸಿರುವುದು ಸಾರ್ವಕಾಲಿಕ ದಾಖಲೆಯಾಗಿದೆ. ಈ ಪೈಕಿ ವಿರಾಟ್ ಕೊಗ್ಲಿ 937 ಅಂಕಗಳನ್ನು ಸಂಪಾದಿಸುವ ಮೂಲಕ ಸಾರ್ವಕಾಲಿಕ ದಾಖಲೆ ಪಟ್ಟಿಯಲ್ಲಿ 11ನೇ ಸ್ಥಾನ ಸಂಪಾದಿಸಿದ್ದಾರೆ.
ಸಾರ್ವಕಾಲಿಕ ದಾಖಲೆ ಪಟ್ಟಿಯಲ್ಲಿ ಸ್ಟೀವನ್ ಸ್ಮಿತ್(947), ಲೇನ್ ಹಂಟನ್(945), ಜಾಕ್ ಹಬ್ಸ್(942), ರಿಕ್ಕಿ ಪಾಂಟಿಂಗ್(942), ಪೀಟರ್ ಮೇ(941), ಗ್ಯಾರಿ ಸೊಬರ್ಸ್, ಕ್ಲೈಡ್ ವಾಲ್ಕೂಟ್, ವಿವಿನ್ ರಿಚರ್ಡ್ಸ್ ಮತ್ತು ಕುಮಾರ ಸಂಗಕ್ಕಾರ(ಎಲ್ಲರೂ 938 ಅಂಕ) ಗಳಿಸಿ ಕ್ರಮವಾಗಿ ಸ್ಥಾನ ಪಡೆದಿದ್ದಾರೆ.
ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ನಲ್ಲಿ ಮೊಹಮ್ಮದ್ ಶಮಿ ಮೂರು ಸ್ಥಾನಗಳಲ್ಲಿ ಏರಿಕೆ ಕಂಡಿದ್ದು ಟಾಸ್ 20ರಲ್ಲಿ ಸ್ಥಾನಪಡೆದಿದ್ದಾರೆ.