ಡಬ್ಬಿಂಗ್ ತಡೆಗೆ ಕ್ರಮ ಕಇಗೊಳ್ಳುವಂತೆ ವಾಟಾಳ್ ನಾಗರಾಜ್ ರಿಂದ ಸಚಿವೆ ಡಾ.ಜಯಮಾಲಾ ಅವರಿಗೆ ಮನವಿ

ಬೆಂಗಳೂರು, ಸೆ.4- ಪರಭಾಷಾ ಚಿತ್ರಗಳನ್ನು ಡಬ್ಬಿಂಗ್ ಮಾಡುವುದನ್ನು ತಡೆಯಬೇಕೆಂದು ಕನ್ನಡ ಒಕ್ಕೂಟದ ಅಧ್ಯಕ್ಷ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಡಾ.ಜಯಮಾಲಾ ಅವರಿಗೆ ಮನವಿ ಸಲ್ಲಿಸಿದರು.
ವಿಧಾನಸೌಧದಲ್ಲಿ ಇಂದು ಸಚಿವರನ್ನು ಭೇಟಿ ಮಾಡಿದ ವಾಟಾಳ್, ಡಬ್ಬಿಂಗ್ ವಿರುದ್ಧ ಸರ್ಕಾರ ಕಾನೂನು ಜಾರಿಗೆ ತರಬೇಕು. ಇಲ್ಲದಿದ್ದರೆ ಕನ್ನಡ ಚಿತ್ರರಂಗ ಗಂಭೀರವಾದ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಐದು ದಶಕಗಳ ಹಿಂದೆಯೇ ಡಬ್ಬಿಂಗ್ ಸಂಸ್ಕøತಿ ವಿರುದ್ಧ ಹೋರಾಟ ಮಾಡಿದ್ದೆವು. ಈಗ ಇಂಗ್ಲೀಷ್, ತಮಿಳು, ತೆಲಗು, ಮಲೆಯಾಳಿ ಸೇರಿದಂತೆ ಪರಭಾಷ ಚಿತ್ರಗಳ ಡಬ್ಬಿಂಗ್ ಮಾಡಿ ಹಣ ಸಂಪಾದಿಸಲು ಮುಂದಾಗಿದ್ದಾರೆ. ಇದರಿಂದ ಕನ್ನಡ ಚಿತ್ರರಂಗ ನೆಲಕಚ್ಚುತ್ತಿದೆ. ವಿಶೇಷವಾಗಿ ಚಿತ್ರರಂಗದ ಕಾರ್ಮಿಕರು ಬೀದಿ ಪಾಲಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದಂತಹ ಸಂಸ್ಥೆಗಳು ಕನ್ನಡ ಡಬ್ಬಿಂಗ್ ವಿರುದ್ಧ ಧ್ವನಿ ಎತ್ತುತ್ತಿಲ್ಲ. ನಮ್ಮ ಮನವಿಯನ್ನು ಸ್ವೀಕರಿಸಿದ ಸಚಿವರು ಸಿನಿಮಾ ರಂಗದವರು ಮತ್ತು ಕನ್ನಡ ಹೋರಾಟಗಾರರನ್ನು ಕರೆದು ಸಭೆ ಮಾಡುವ ಭರವಸೆ ನೀಡಿದ್ದಾರೆ ಎಂದರು.
ಕನ್ನಡಪರ ಹೋರಾಟಗಾರರಾದ ಎಚ್.ವಿ.ಗಿರೀಶ್‍ಗೌಡ, ಅಜಯ, ಎಚ್.ಬಿ.ಪಾರ್ಥಸಾರಥಿ ಮತ್ತಿತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ