ಮುಂಬೈ: ಬಾಲಿವುಡ್ ದಿಗ್ಗಜ ನಟ ದಿಲೀಪ್ ಕುಮಾರ್ ಗೆ ಎದೆಯ ಸೋಂಕು ಕಾಣಿಸಿಕೊಂಡಿದ್ದರಿಂದ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅವರ ಪತ್ನಿ ಸಾಹಿರಾ ಬಾನು ತಿಳಿಸಿದ್ದಾರೆ.ದಿಲೀಪ್ ಕುಮಾರ್ ಆರೋಗ್ಯದ ಬಗ್ಗೆ ಆತಂಕಗೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿರುವ ಆಸ್ಪತ್ರೆ ವೈದ್ಯರು , 95 ವರ್ಷದ ನಟ ಎಷ್ಟು ದಿನ ಆಸ್ಪತ್ರೆಯಲ್ಲಿರಬೇಕು ಎಂಬ ಬಗ್ಗೆ ಏನನ್ನೂ ಹೇಳಲಿಕ್ಕೆ ಆಗುವುದಿಲ್ಲ ಎಂದಿದ್ದಾರೆ.ದಿಲೀಪ್ ಕುಮಾರ್ ಆಸ್ಪತ್ರೆಯಲ್ಲಿದ್ದು, ನಿರಂತರವಾಗಿ ತಪಾಸಣೆ ಮಾಡಲಾಗುತ್ತಿದ್ದು, ಎಲ್ಲಾ ರೀತಿಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ನುರಿತ ವೈದ್ಯರನ್ನೊಳಗೊಂಡ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಾಹಿರಾಬಾನು ತಿಳಿಸಿದ್ದಾರೆ.ದಿಲೀಪ್ ಕುಮಾರ್ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಇದೇ ಮೊದಲ ಬಾರಿಗೆ ಈ ವಿಷಯವನ್ನು ಅವರ ಸಂಬಂಧಿ ಪೈಸಲ್ ಪಾರೂಖಿ ತಿಳಿಸಿದ್ದಾರೆ. ಬುಧವಾರ ಮಧ್ಯಾಹ್ನ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲಾಗಿರುವುದಾಗಿ ಲೀಲಾವತಿ ಆಸ್ಪತ್ರೆಯ ಉಪಾಧ್ಯಕ್ಷ ಅಜಯ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
Seen By: 39 ದಿಗ್ಗಜ ದಿಲೀಪ್ ಕುಮಾರ್ (95) ತೀವ್ರ ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೆ ಮತ್ತೆ ಕಾಡುತ್ತಿರುವ ನ್ಯೂಮೋನಿಯಾ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಭಾನುವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. [more]