ಕೊನೆಯವಾರದಲ್ಲಿ ಸಂಪುಟ ವಿಸ್ತರಣೆ: ದಿನೇಶ್ ಗುಂಡೂರಾವ್

ಹುಬ್ಬಳ್ಳಿ- ಸಪ್ಟೆಂಬರ್ ಕೊನೆಯ ವಾರದಲ್ಲಿ ಸಚಿವ ಸಂಪು ವಿಸ್ತರಣೆ ಮಾಡಲಾಗುದು. ಉಳಿದ ಆರು ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವದು ಮಾಡಲಾಗುವ ಎಂದು ಕೆ ಪಿ ಸಿ ಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ಹುಬ್ಬಳ್ಳಿ ವಿಮಾನ‌ ನಿಲ್ದಾಣದಲ್ಲಿ ಮಾತನಾಡಿದ ಅವರು, ಉತ್ತರ ಕರ್ಣಾಟಕಕ್ಕೆ ಯಾವುದೇ ಅನ್ಯಾಯ ಆಗಲು ಬಿಡುವುದಿಲ್ಲ. ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಒತ್ತು ಕೊಡಲಾಗುವುದು. ಕಾಂಗ್ರೆಸ್‌ ನಲ್ಲಿ ಯಾವುದೇ ಒಳ ಜಗಳ ಇಲ್ಲ. ರಮೇಶ್ ಜಾರಕಿಹೊಳಿ ಮಾತನಾಡುವ ಶೈಲಿಯೇ ಹಾಗೇ. ನಮ್ಮಲ್ಲಿ ಯಾವುದೇ ಒಳ ಜಗಳ ಇಲ್ಲ ಎಂದು ಸಮರ್ಥನೆ ಮಾಡಿಕೊಂಡರು. ರಾಫೆಲ್ ಹಗರಣದಲ್ಲಿ ನೇರವಾಗಿ ಮೋದಿ ಭಾಗಿಯಾಗಿದ್ದಾರೆ. ರಾಫೇಲ್ ಡೀಲ್ ನಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿದೆ. ಈ ಕುರಿತು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ಮಾಡಲಾಗುವುದು. ದಿನೇ ದಿನೇ ತೈಲ ಬೆಲೆ ಏರಿಕೆ ಆಗುತ್ತಿದೆ , ರೂಪಾಯಿ ಮೌಲ್ಯ ಕುಸಿಯುತ್ತಿದೆ. ವಿತ್ತ ಸಚಿವ ಅರುಣ್ ಜೆಟ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ದೇಶದಲ್ಲಿ ಆರ್ಥಿಕ ಅರಾಜಕತೆ ಉಂಟಾಗಿದೆ. ಇದಕ್ಕೆ ನೇರ ಕಾರಣ ಪ್ರಧಾನಿ ಮೋದಿ. ಪ್ರಾದಾನಿ ಮೋದಿ ಕೇವಲ ಶೂಟು ಬೂಟ್ ಹಾಕಿ ಭಾಷಣಕ್ಕೆ ಸೀಮಿತರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ