ಬಸ್ ಪ್ರಯಾಣ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಜಯಕರ್ನಾಟಕ ಖಂಡನೆ

ಬೆಂಗಳೂರು, ಸೆ.5-ತೈಲಬೆಲೆ ನೆಪ ಮಾಡಿ ಬಸ್ ಪ್ರಯಾಣ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಜಯಕರ್ನಾಟಕ ಸಂಘಟನೆ ಖಂಡಿಸಿದೆ.
ಸದ್ಯ ತೈಲದ ಮೇಲೆ ವಿಧಿಸಿರುವ ಹೆಚ್ಚುವರಿ ತೆರಿಗೆಯನ್ನು ಕಡಿತ ಮಾಡುವ ಬದಲು ಅದನ್ನು ಜನಸಾಮಾನ್ಯರ ಮೇಲೆ ಹೇರುವ ಪ್ರಯತ್ನ ಸರಿಯಾದುದಲ್ಲ. ಕೂಡಲೇ ಇದರ ಬಗ್ಗೆ ಗಮನ ಹರಿಸಬೇಕು ಎಂದು ಜಯಕರ್ನಾಟಕ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಜಗದೀಶ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ನೆರೆಹಾವಳಿ ಹಾಗೂ ಬರದಿಂದ ಜನರು ತತ್ತರಿಸುತ್ತಿದ್ದಾರೆ. ಇದರ ನಡುವೆ ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಏರಿಸಿದರೆ ಅದು ಪ್ರತಿಕೂಲ ಪರಿಣಾಮ ಬೀರುತ್ತದೆ. ಅಗತ್ಯ ವಸ್ತುಗಳ ಬೆಲೆಯೂ ಕೂಡ ಏರುತ್ತದೆ. ಇದನ್ನು ಮನಗಂಡು ಸರ್ಕಾರ ಜನಹಿತ ಕಾಪಾಡುವಂತಹ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಂಘಟನೆ ವತಿಯಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ