
ರಾಯಚೂರು: ಸ್ಯಾಂಡಲ್’ವುಡ್ ಹಿರಿಯ ಹಾಸ್ಯ ನಟ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ತೀವ್ರವಾಗಿ ಅಸ್ವಸ್ಥರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.
ಶ್ರಾವಣ ಮಾಸದ ಕಡೆಯ ಸೋಮವಾರ ಹಿನ್ನಲೆಯಲ್ಲಿ ನಟ ದೊಡ್ಡಣ್ಣ ಅವರು ಕುಟುಂಬ ಸಮೇತ ದೇವಸಗೂರಿನಲ್ಲಿರುವ ಸೂಗೂರೇಶ್ವರ ದೇವಸ್ಥಾನಕ್ಕೆ ತೆರಳಿದ್ದರು. ದೇವಸ ದರ್ಶನದ ಮೇಲೆ ವೇಳೆ ಸರದಿಯಲ್ಲಿ ನಿಂತಿದ್ದ ದೊಡ್ಡಣ್ಣ ಅವರು ತೀವ್ರವಾಗಿ ಬಳಲಿದ್ದರು.
ತೀವ್ರವಾಗಿ ಬಳಲಿದ್ದ ದೊಡ್ಡಣ್ಣ ಅವರಿಗೆ ಲೋ ಬಿಪಿಯಾಗಿ ತಾವು ಉಳಿದುಕೊಂಡಿದ್ದ ವಸತಿ ಗೃಹದ ಶೌಚಾಲಯದಲ್ಲಿ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಆರ್’ಟಿಪಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.