ರಾಹುಲ್ ಗಾಂಧಿ ದೇಶದ ದೊಡ್ಡ ಬಫೂನ್ ಎಂದ ಕೆಸಿಆರ್: 105 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಟಿ ಆರ್ ಎಸ್

ಹೈದರಾಬಾದ್: ಅವಧಿಗೂ ಮುನ್ನವೇ ತೆಲಂಗಾಣ ವಿಧಾನಸಭೆಯನ್ನು ವಿಸರ್ಜಿಸಿರುವ ಸಿಎಂ ಕೆ. ಚಂದ್ರಶೇಖರ್ ರಾವ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ದೇಶದ ದೊಡ್ಡ ಬಫೂನ್ ಎಂದು ಕರೆದಿದ್ದಾರೆ.

ವಿಧಾನಸಭೆ ವಿಸರ್ಜನೆ ನಿರಣಯ ಕೈಗೊಂಡ ಬಳಿಕ ರಾಜ್ಯಪಾಲರ ಭೇಟಿಮಾಡಿ, ಬಳಿಕ ಮಾತನಾಡಿದ ಕೆಸಿಆರ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೇಶದ ದೊಡ್ಡ ಬಫೂನ್. ಅವರು ಸಂಸತ್ ನಲ್ಲಿ ಪ್ರಧಾನಿಯನ್ನು ಆಲಿಂಗನ ಮಾಡಿ, ಕಣ್ಣು ಹೊಡೆದಿದ್ದನ್ನು ಎಲ್ಲರೂ ಗಮನಿಸಿದ್ದಾರೆ. ರಾಹುಲ್ ಗಾಂಧಿ ಒಂಥರಾ ನಮಗೆ ಆಸ್ತಿ ಇದ್ದಂಗೆ ಅವರು ಇಲ್ಲಿಗೆ ಬಂದಷ್ಟೂ ನಾವು ಹೆಚ್ಚು ಸ್ಥಾನಗಳನ್ನು ಗಳಿಸುತ್ತೇವೆ ಎಂದು ಹೇಳಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ನಾಯಕರು ಚುನಾವಣಾ ರಂಗಕ್ಕೆ ಬಂದು ಸವಾಲು ಎದುರಿಸಲಿ,ಜನರು ಅವರಿಗೆ ಪ್ರತ್ಯುತ್ತರ ನೀಡುತ್ತಾರೆ ಎಂದರು.

ಇದೇ ವೇಳೆ ಬಿಜೆಪಿಯೊಂದಿಗೆ ಕೈ ಜೋಡಿಸುವ ಸಾಧ್ಯತೆಯೇ ಇಲ್ಲ ಎಂದು ಕೆಸಿಆರ್ ಸ್ಪಷ್ಟಪಡಿಸಿದ್ದಾರೆ.

ಇನ್ನು ವಿಧಾನಸಭೆ ವಿಸರ್ಜನೆ ಮಾಡಿದ ಕೆಲವೇ ಗಂಟೆಗಳಲ್ಲಿ ಹಂಗಾಮಿ ಸಿಎಂ ಕೆ ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್ ಎಸ್ 105 ಕ್ಷೇತ್ರಗಳ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ಕೇವಲ ಇಬ್ಬರು ಹಾಲಿ ಶಾಸಕರಿಗೆ ಮಾತ್ರ ಟಿಕೆಟ್ ನಿರಾಕರಿಸಲಾಗಿದ್ದು, ಉಳಿದ 14 ಕ್ಷೇತ್ರಗಳ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಿಸುವುದಾಗಿ ಕೆಸಿಆರ್ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ