ನಕಲಿ ಮದ್ಯದ ಹಾವಳಿ ತಡೆಗೆ ಸರ್ಕಾರದ ಕ್ರಮಕ್ಕೆ ಒತ್ತಾಯ

ಬೆಂಗಳೂರು, ಸೆ.6- ರಾಜ್ಯದಲ್ಲಿ ಮಿತಿ ಮೀರಿರುವ ನಕಲಿ ಮದ್ಯದ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಂಭೀರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಮಾಜವಾದಿ ಪಕ್ಷದ ಮುಖಂಡ ಚಂದ್ರೇಗೌಡ ಒತ್ತಾಯಿಸಿದ್ದಾರೆ.
ಲೋಕೋಪಯೋಗಿ ಸಚಿವ ರೇವಣ್ಣ ಅವರು ಹಾಸನದಲ್ಲಿ ನಿನ್ನೆ ಅಧಿಕಾರಿಗಳ ಸಭೆ ವೇಳೆ ಹಳ್ಳಿಗಳಲ್ಲಿ ನಕಲಿ ಮದ್ಯದ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಡಿಸಿಗೆ ಆದೇಶ ನೀಡಿದ್ದಾರೆ.
ಆದರೆ ಇಂತಹ ನಿರ್ಧಾರ ಇಡೀ ರಾಜ್ಯಕ್ಕೆ ಅನ್ವಯವಾಗಬೇಕು ಇದರ ಬಗ್ಗೆ ಸರ್ಕಾರ ಕಠಿಣ ಕಾನೂನು ಜಾರಿಗೆ ತರುವುದು ಅಗತ್ಯವಾಗಿದೆ ಎಂದು ಚಂದ್ರೇಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಹಲವೆಡೆ ಕಳ್ಳಭಟ್ಟಿ ದಂಧೆಗಳು ನಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಹಲವರು ಮದ್ಯ ಸೇವನೆಯಿಂದ ಮೃತಪಟ್ಟಿದ್ದಾರೆ. ಇದರ ಬಗ್ಗೆ ಪೆÇಲೀಸ್ ಇಲಾಖೆ ನೀಡಿರುವ ಮಾಹಿತಿಯನ್ನು ಆಧರಿಸಿ ಮತ್ತಷ್ಟು ಎಚ್ಚರಿಕೆ ವಹಿಸಬೇಕಾಗಿದೆ.
ಹಳ್ಳಿಗಳಲ್ಲಿ ನಕಲಿ ಮದ್ಯದ ಹಾವಳಿಯಿಂದ ಅನೇಕ ಕುಟುಂಬಗಳು ಬೀದಿ ಪಾಲಾಗುವ ಪರಿಸ್ಥಿತಿ ಬಂದಿದೆ. ಇದರ ಬಗ್ಗೆ ತುರ್ತು ಕ್ರಮ ಕೈಗೊಳ್ಳುವುದು ಅಗತ್ಯ ಎಂದು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ