ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಈ ಹಿನ್ನಲೆಯಲ್ಲಿ ಸೆ.10ರದು ವಿಪಕ್ಷಗಳು ಕರೆ ನೀಡಿರುವ ಭಾರತ ಬಂದ್ ಗೆ ಇನ್ನಷ್ಟು ಬಲಬಂದಂತಾಗಿದೆ.
ದೆಹಲಿಯಲ್ಲಿ ಶುಕ್ರವಾರ ಲೀಟರ್ ಪ್ರತೀ ಲೀಟರ್ ಪೆಟ್ರೋಲ್ ದರ ಏಕಾಏಕಿ 48 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ ಪ್ರತೀ ಲೀಟರ್ ಗೆ 79.99 ರೂ.ಗಳಿಗೆ ಮಾರಾಟವಾಗುತ್ತಿದೆ. ಇನ್ನು ಡಿಸೇಲ್ ಬೆಲೆ ಲೀಟರ್ ಗೆ 72.07 ರೂ. ಆಗಿದ್ದು, 52 ಪೈಸೆ ಏರಿಕೆಯಾಗಿದೆ.
ಮುಂಬೈನಲ್ಲಿ ಪ್ರತಿ ಲೀ.ಗೆ ಪೆಟ್ರೋಲ್ 87.39 ರೂ ಏರಿಕೆಯಾಗಿದ್ದು, ಡಿಸೇಲ್ 76.51 ರೂ.ಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 82.19 ರೂ. ಆಗಿದ್ದು, 21 ಪೈಸೆಯಷ್ಟು ಏರಿಕೆಯಾಗಿದೆ. ಡೀಸೆಲ್ ಬೆಲೆ ಕೂಡ 73.93 ರೂ. ಆಗಿದ್ದು, 21 ಪೈಸೆ ಏರಿಕೆಯಾಗಿದೆ.
ಈ ಕುರಿತು ಮಾತನಾದಿರುವ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರುತ್ತಿರುವುದು ಮತ್ತು ಡಾಲರ್ ಎದುರು ರೂಪಾಯಿ ಕುಸಿಯುತ್ತಿರುವುದೇ ಬೆಲೆ ಏರಿಕೆಗೆ ಕಾರಣ. ಸದ್ಯದ ಬೆಲೆ ಏರಿಕೆ ಶಾಶ್ವತವೂ ಅಲ್ಲ ಎಂದು ಹೇಳಿದ್ದಾರೆ.