ಬೆಂಗಳೂರು, ಸೆ.7- ವಿಶ್ವ ಪಿಸಿಒಎಸ್ (ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್) ದಿನಾಚರಣೆ ಅಂಗವಾಗಿ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಡಾ.ಭದ್ರಾಸ್ ಮಲ್ಟಿ ಸ್ಪೆಷಾಲಿಟಿ ಸಂಸ್ಥೆ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ.
ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ತಜ್ಞ ವೈದ್ಯ ಹಾಗೂ ಡಾ.ಭದ್ರಾಸ್ ಗ್ರೂಪ್ನ ಅಧ್ಯಕ್ಷ ಡಾ.ಮುಖೇಶ್ಭದ್ರಾ, ಸಮಾಜದಲ್ಲಿ ಆರೋಗ್ಯ ರಕ್ಷಣೆ ಅತ್ಯಂತ ಪ್ರಮುಖವಾಗಿರುತ್ತದೆ. ಅದರಲ್ಲೂ ಮಹಿಳೆಯರೇ ಬೆನ್ನೆಲುಬು ಇದ್ದಂತೆ. ಆದರೆ, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಅನೇಕ ಮಹಿಳೆಯರು ಪಿಸಿಒಎಸ್ ರೋಗದಿಂದ ಬಳಲುತ್ತಿದ್ದಾರೆ. ಇದಕ್ಕಾಗಿ ಹೋಮಿಯೋಪತಿಯಲ್ಲಿ ಸುರಕ್ಷಿತ ಚಿಕಿತ್ಸೆ ಇದೆ ಎಂಬುದು ಸಾಬೀತಾಗಿದೆ. ಈ ನಿಟ್ಟಿನಲ್ಲಿ ನಾವು ಮಹಿಳೆಯರಿಗೆ ನಮ್ಮ ಕೇಂದ್ರಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸೆ ಬಗ್ಗೆ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಈ ಸಮಸ್ಯೆ ಸಾಮಾನ್ಯ ರೋಗವೆಂದು ಪರಿಗಣಿಸಿದರೂ ಸಹ ಅರಿವು ಅತ್ಯಂತ ಅಗತ್ಯ ಎಂದು ಅವರು ಹೇಳಿದರು.