ಬೆಂಗಳೂರು, ಸೆ.7- ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಜೆಡಿಎಸ್ ಇದೇ 10ರಂದು ನಗರದಲ್ಲಿ ನಡೆಸಲಿದೆ.
ಪುರಭವನದ ಮುಂಭಾಗ ಪ್ರತಿಭಟನೆ ನಡೆಸಲು ಜೆಡಿಎಸ್ ಬೆಂಗಳೂರು ಮಹಾನಗರ ಘಟಕ ನಿರ್ಧರಿಸಿದೆ.
ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗುತ್ತಿರುವುದರಿಂದ ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ. ಅಲ್ಲದೆ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಷಯದಲ್ಲಿ ಜನಸಾಮಾನ್ಯರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಜೆಡಿಎಸ್ ಬೆಂಗಳೂರು ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಆರೋಪಿಸಿದ್ದಾರೆ.
ಅಂದು ಪುರಭವನದ ಮುಂದೆ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ಖಂಡಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.