ಬೆಂಗಳೂರು, ಸೆ.7- ಮನೆಯೊಂದರ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಹಣ ಹಾಗೂ ಆಭರಣವನ್ನು ಕದ್ದೊಯ್ದಿರುವ ಘಟನೆ ಮೈಕೋ ಲೇ ಔಟ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಟಿಎಂ ಲೇ ಔಟ್ ಎರಡನೆ ಹಂತ 26ನೆ ಕ್ರಾಸ್ ನಿವಾಸಿ ಮಜೀದ್ ಷರೀಫ್ ಎಂಬುವರು ಸೆ.2ರಂದು ಕುಟುಂಬ ಸಮೇತ ಊರಿಗೆ ತೆರಳಿದ್ದರು. ಈ ವೇಳೆ ಕಳ್ಳರು ಇವರ ಮನೆಯ ಬೀಗ ಒಡೆದು ಒಳ ನುಗ್ಗಿ ಹಣ, ಆಭರಣ ಹಾಗೂ ಇನ್ನಿತರ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ನಿನ್ನೆ ರಾತ್ರಿ ಮಜೀದ್ ಷರೀಫ್ ಕುಟುಂಬ ಮನೆಗೆ ವಾಪಸಾದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದು ತಕ್ಷಣ ಮೈಕೋ ಲೇ ಔಟ್ ಪೆÇಲೀಸರಿಗೆ ತಿಳಿಸಿದ್ದಾರೆ.
ಶ್ವಾನದಳ ಹಾಗೂ ಬೆರಳಚ್ಚು ತಜ್ಞರು, ಪೆÇಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ.
ಮೈಕೋ ಲೇ ಔಟ್ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.