ಬೆಂಗಳೂರು, ಸೆ.8- ಬೆಂಗಳೂರು ಗ್ರಾಮಾಂತರ ಪೆÇಲೀಸ್ ವರಿಷ್ಠಾಧಿಕಾರಿ ಕಚೇರಿ ಬಳಿ ಇಬ್ಬರು ಭದ್ರತಾ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ರಾತ್ರಿ ನಡೆದಿದೆ.
ಹೈಗ್ರೌಂಡ್ಸ್ ಪೆÇಲೀಸ್ ಠಾಣೆ ಹಾಗೂ ವಿಧಾನಸೌಧ ಪೆÇಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿವೆ.
ಹೈಗ್ರೌಂಡ್ಸ್ ಪೆÇಲೀಸ್ ಠಾಣಾ ವ್ಯಾಪ್ತಿಯ ಕನ್ನಿಂಗ್ಹ್ಯಾಮ್ ರಸ್ತೆಯ ಚಂದ್ರಿಕಾ ಹೋಟೆಲ್ ಹಿಂಭಾಗ ನಿರ್ಮಾಣ ಹಂತದ ಕಟ್ಟಡದಲ್ಲಿ ಮಹೇಂದ್ರ ಕ್ಲಬ್ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಮಹಮ್ಮದ್ (30) ಎಂಬವರು ನೇಣಿಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಹೈಗ್ರೌಂಡ್ಸ್ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ವಿಧಾನಸೌಧ ಪೆÇಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಅಪಾರ್ಟ್ಮೆಂಟ್ ಒಂದರ ಬಳಿ ಲಿಂಗಯ್ಯ ಎಂಬವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಖಾಸಗಿ ಸಂಸ್ಥೆಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಎರಡೂ ಪ್ರಕರಣಗಳು ಗ್ರಾಮಾಂತರ ಎಸ್ಪಿ ಕಚೇರಿ ಕೂಗಳತೆಯಲ್ಲೇ ನಡೆದಿದ್ದು, ಸ್ಥಳಕ್ಕೆ ಎರಡೂ ಠಾಣೆಗಳ ಪೆÇಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.