ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಓರ್ವ ಉಗ್ರನನ್ನು ಸದೆಬಡಿದ ಸೇನೆ, ಓರ್ವ ಯೋಧನಿಗೆ ಗಾಯ

ಅನಂತ್’ನಾಗ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಗೆ ದಿಟ್ಟ ಉತ್ತರ ನೀಡಿರುವ ಭಾರತೀಯ ಸೇನಾಪಡೆ ಓರ್ವ ಉಗ್ರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಅಚಲ್’ಬಲ್ ಬ್ಲಾಕ್ ಬಳಿ ಉಗ್ರನೋರ್ವ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿ, ಶಸ್ತ್ರಾಸ್ತ್ರ ಕಸಿದುಕೊಳ್ಳುವ ಯತ್ನ ನಡೆಸಿದ್ದಾನೆ. ಈ ವೇಳೆ ಉಗ್ರನಿಗೆ ದಿಟ್ಟ ಉತ್ತರ ನೀಡಿರುವ ಭದ್ರತಾ ಪಡೆಗಳು ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. 

ಘಟನೆಯಲ್ಲಿ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಉಗ್ರರ ಗುರ್ತಿಕೆ ಕುರಿತಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿ ವೇಳೆ ಮತ್ತೋರ್ವ ಉಗ್ರ ತಲೆಮರೆಸಿಕೊಂಡಿದ್ದು, ಉಗ್ರನಿಗಾಗಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ತಿಳಿದುಬಂದಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ