ಗೌರಿ-ಗಣೇಶ ಹಬ್ಬ ಪರಿಸರ ಸ್ನೇಹಿಯಾಗಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಾಗೃತಿ ಕಾರ್ಯಕ್ರಮ

ಬೆಂಗಳೂರು,ಸೆ.8-ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಉದ್ದೇಶದಿಂದ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಬಹುಕೌಶಲ್ಯ ತರಬೇತಿ ಮತ್ತು ಅಂತಾರಾಷ್ಟ್ರೀಯ ಸಂಶೋಧನಾ ಸಂಸ್ಥೆ, ಸೃಷ್ಟಿ ಇಂಟರ್‍ನ್ಯಾಷನ¯ ಸಹಯೋಗದಲ್ಲಿ ಮಾಗಡಿ ರಸ್ತೆಯ ಲಕ್ಷ್ಮಿ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಆರ್.ಶಂಕರ್ ಪಾಲ್ಗೊಂಡು ಮಾತನಾಡಿ, ಗಣೇಶ ಹಬ್ಬಕ್ಕೆ ಪಿಒಪಿ ಮತ್ತು ಬಣ್ಣದ ಗಣೇಶನನ್ನು ಪ್ರತಿಷ್ಠಾಪಿಸುವುದನ್ನು ಬಿಟ್ಟು ಪರಿಸರ ಸ್ನೇಹಿ ಮಣ್ಣಿನ ಗಣೇಶವನ್ನು ಮಾತ್ರ ಪೂಜಿಸುವುದರಿಂದ ಜಲಮಾಲಿನ್ಯ ತಡೆಗಟ್ಟಬಹುದಾಗಿದೆ ಎಂದರು.

ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಮಾತನಾಡಿ, ಮಣ್ಣಿನ ಗಣಪತಿಯನ್ನು ಇಟ್ಟು ಪೂಜಿಸುವುದರಿಂದ ಜಲಮಾಲಿನ್ಯ ತಡೆಗಟ್ಟಬಹುದಾಗಿದೆ. ಅದಕ್ಕಾಗಿ ನಾವು ಈಗಾಗಲೇ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಲಕ್ಷ್ಮಿ ಇಂಟರ್ ನ್ಯಾಷನಲ್ ಶಾಲೆಯ ವ್ಯವಸ್ಥಾಪಕ ಪೆÇನ್ನಪ್ಪ , ನಿವೃತ್ತ ಡಿಜಪಿ ವೆಂಕಟರಾಮು, ಡಾ.ಲಕ್ಷ್ಮಿಕಾಂತ್, ಬಹುಕೌಶಲ್ಯ ತರಬೇತಿ ಮತ್ತು ಅಂತಾರಾಷ್ಟ್ರೀಯ ಸಂಸ್ಥೆಯ ವ್ಯವಸ್ಥಾಪಕ ಡಾ.ಗೋವಿಂದರಾಜು, ಉಸಿರು ಸಂಸ್ಥೆಯ ಶೋಭಾ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ