ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿಯಲ್ಲಿ ಧಕ್ಕೆ ಉಂಟಾಗದು: ಎಚ್.ವಿಶ್ವನಾಥ್ ಸ್ಪಷ್ಟನೆ

ಬೆಂಗಳೂರು,ಸೆ.8-ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿಯಲ್ಲಿ ಧಕ್ಕೆ ಉಂಟಾಗುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯ ಸರ್ಕಾರವನ್ನು ಬೀಳಿಸುವ ಯತ್ನ ಮಾಡುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯಲ್ಲಿ ಕುಂದುಂಟಾಗುವುದಿಲ್ಲ. ಆಡಿಸಿ ನೋಡು, ಬೀಳಿಸಿ ನೋಡು ಏನೂ ಆಗದು ಎಂಬ ಹಾಡನ್ನು ಇದೇ ಸಮಯದಲ್ಲಿ ಉಲ್ಲೇಖಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದೇಶದಲ್ಲಿ ಆರಾಮವಾಗಿದ್ದಾರೆ. ಈಗ ಅವರ ವಿಚಾರದ ಚರ್ಚೆ ಬೇಡ ಎಂದರು.
ಕೇಂದ್ರದಲ್ಲಿ ಅಧೀನದಲ್ಲಿರುವ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು,ಕೇಂದ್ರ ಸರ್ಕಾರದ ವಿರುದ್ದ ಮಾತನಾಡುವವರನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಜೆಡಿಎಸ್ ಅನ್ಯಾಯಕ್ಕೊಳಗಾದವರ ಪರವಾಗಿ ಹೋರಾಟ ಮಾಡಲಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ