ಭಾರತ್ ಬಂದ್: ರಾಜ್ಯಾದ್ಯಂತ ಬಿಗಿ ಪೆÇಲೀಸ್ ಬಂದೋಬಸ್ತ್

ಬೆಂಗಳೂರು, ಸೆ.9- ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್, ನಾಳೆ ಭಾರತ್ ಬಂದ್‍ಗೆ ಕರೆ ಕೊಟ್ಟಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಬಿಗಿ ಪೆÇಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸ್ಥಳೀಯ ಪೆÇಲೀಸರ ಜತೆಗೆ 30 ಕೆಎಸ್‍ಆರ್‍ಪಿ ತುಕಡಿ, 30 ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ