ಸಾರ್ವಜನಿಕ ಉದ್ದಿಮೆಗಳ ಸಮಿತಿಯ ಅಧ್ಯಕ್ಷರಾಗಿ ತನ್ವೀರ್ ಸೇಠ್ ನೇಮಕ

ಬೆಂಗಳೂರು, ಸೆ.9-ಪ್ರಸಕ್ತ ಸಾಲಿನ ಸಾರ್ವಜನಿಕ ಉದ್ದಿಮೆಗಳ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ತನ್ವೀರ್ ಸೇಠ್ ಅವರನ್ನು ನೇಮಕ ಮಾಡಲಾಗಿದೆ.
ಸಮಿತಿಯ ಅಧ್ಯಕ್ಷರಾಗಿದ್ದ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರ ಬದಲಿಗೆ ತನ್ವೀರ್ ಸೇಠ್ ಅವರನ್ನು ಅಧ್ಯಕ್ಷರನ್ನಾಗಿ ಸಭಾಧ್ಯಕ್ಷ ರಮೇಶ್ ಕುಮಾರ್ ಅವರು ನೇಮಕ ಮಾಡಿದ್ದಾರೆ.
ಎಂ.ಬಿ.ಪಾಟೀಲ್ ಅವರು ಸಮಿತಿಯ ಸದಸ್ಯರಾಗಿ ಮುಂದುವರಿಯುತ್ತಾರೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ