ಭಾರತ್ ಬಂದ್ ಹುಬ್ಬಳ್ಳಿ ಸ್ತಬ್ದ

ಹುಬ್ಬಳ್ಳಿ: ತೈಲ ಬೆಲೆ ಏರಿಕೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಸಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷನಕೊಟ್ಟಿದ್ದ ಭಾರತ್ ಬಂದ್ ಕರೆಗೆ  ಹುಬ್ಬಳ್ಳಿಯಲ್ಲಿ ಉತ್ತಮ ಬೆಂಬಲ ದೊರೆತಿದ್ದು, ವಾಣಿಜ್ಯ ನಗರಿಗೂ ಬಂದ್ ಬಿಸಿ ತಟ್ಟಿದ್ದು, ವಾಹನ ಸಂಚಾರ‌ವಿಲ್ಲದೆ ಜನರು ಪರದಾಡುವಂತಾಗಿತ್ತು.

ಬೆಳಿಗ್ಗೆ 6  ಗಂಟೆಗೆ ರಸ್ತೆಗಿಳೀದ ಕಾಂಗ್ರೆಸ್ ಕಾರ್ಯಕರ್ತರು ನಗರದ ಚನ್ನಮ್ನ ವೃತ್ತದಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡಡೆಸಿದರು. ರಸ್ತೆ ಸಂಚಾರ ಮತ್ತು ತಡೆದು ಅಂಗಡಿ ಮುಗ್ಗಟ್ಟುಳನ್ನ ಬಂದ್ ಮಾಡಿಸಿದರು. ಕಳಸಾ-ಬಂಡೂರಿ ಹೋರಾಟಗಾರರು, AITUC ಕಾರ್ಯಕರ್ತರು, ಅಟೋ ಮತ್ತು ಮಾಲೀಕರ ಸಂಘಟನೆ, ಕನ್ನಡಪರ ಸಂಘಟನೆ ಸೇರಿದಂತೆ ವಿವಿಧ ಘಟನೆಗಳು ಬಂದ್ ಗೆ ಬೆಂಬಲ ನೀಡಿದವು. ನಗರದ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಟಯರ್ ಗೆ ಬೆಂಕಿಹಚ್ಚಿ ಪ್ರತಿಭಟಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಸಂಗೊಳ್ಳಿ ರಾಯಣ್ಣ ವೃತದಲ್ಲಿ‌ ಪ್ರತಿಭಟನೆ ನಡೆಸಿದ ಕಳಸಾ ಬಂಡೂರಿ ಹಾಗೂ ಮಹದಾಯಿ ಹೋರಾಟ ಸಮಿತಿ ಕಾರ್ಯಕರ್ತರು, ಖಾಲಿ ಗ್ಯಾಸ್ ಸಿಲಿಂಡರ್ ಮೆರವಣಿಗೆ ಹಾಗೂ ಟ್ರ್ಯಾಕ್ಟರ್ ಗೆ ಹಗ್ಗ ಕಟ್ಟಿ ಎಳೆಯುವ‌ ಮೂಲಕ ವಿನೂತನಾವಾಗಿ ಪ್ರತಿಭಟೊಸಿದರು. ಇನ್ನು ಅಟೋ ಮಾಲೀಕರ ಮತ್ತು ಚಾಲಕರ ಸಂಘದಿಂದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರ ಅಣುಕು ಪ್ರದರ್ಶನ ಮಾಡಿ ಸಾರ್ವಜನಿಕವಾಗಿ ಹರಾಜ್ ಹಾಕಿದರು. ಬಿಜೆಪಿ ನಾಯಕರ ಪ್ರತಿಕೃತಿ ದಹಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ನಗರದ ಹರ್ಷಾ ಕಾಂಪ್ಲೆಕ್ಸ್ ಗೆ ತೆರಳಿದ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯ ಪೂರಕವಾಗಿ ಅಂಗಡಿಗಳನ್ನ ಬಂದ್ ಮಾಡಲು ಮುಂದಾದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ವ್ಯಾಪಾರಸ್ಥರು, ಮೋದಿ ಮೋದಿ ಎಂದು ಕೂಗುವ ಮೂಲಕ ಪ್ರತಿಭಟನಾಕಾರರ ವಿರುದ್ಧ ತಿರುಗಿ ಬಿದ್ದರು. ಕೆಲ ಕಾಲ ಬಿಗುವಿನ ವಾತವರಣ ನಿರ್ಮಾಣ ವಾಗಿತ್ತು. ಸುದ್ಧಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ನಂತರ ಎಲ್ಲ ಅಂಗಡಿಗಳನ್ನ ಬಂದ್ ಮಾಡಿಸಿದ‌ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು.

ಇದಕ್ಕೂ ಮೊದಲು, ಬೆಳಿಗ್ಗೆ 11ರ ಸುಮಾರಿಗೆ ಇತ್ತ ಹುಬ್ಬಳ್ಳಿ ಲ್ಯಾಮಿಂಗ್ಟನ್ ರಸ್ತೆಯಲ್ಲಿರುವ, ಸಂಸದ ಪ್ರಲ್ಹಾದ ಜೋಶಿ ಕಚೇರಿಗೆ ಮುತ್ತಿಗೆ ಹಾಕಿದ ಜೆಡಿಎಸ್ ಕಾರ್ಯಕರ್ತರು, ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದರು. ಸಂಸದ ಪ್ರಲ್ಹಾದ ಜೋಶಿ ಹಾಗೂ ಪ್ರಧಾನಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

ಜೆಡಿಎಸ್ ನಡೆಯನ್ನ ಖಂಡಿಸಿದ ಬಿಜೆಪಿ ಕಾರ್ಯಕರ್ತರು, ಮಧ್ಯಾಹ್ನ 1:30ರ ಸುಮಾರಿಗೆ ಹುಬ್ಬಳ್ಳಿ ಉಪನಗರಠಾಣೆಗೆ ಮುತ್ತಿಗೆ ಹಾಕಿ ಜೆಡಿಎಸ್ ಕಾರ್ಯಕರನ್ನ ಬಂಧಿಸುವಂತೆ ಒತ್ತಾಯಿಸಿದರು. ಜೆಡಿಎಸ್ ಕಾರ್ಯಕರ್ತರು ಭಾರತ್ ಬಂದ್ ನೆಪದಲ್ಲಿ ಕಾನೂನು ಬಾಹಿರವಾಗಿ ಸಂಸದರ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಕಚೇರಿಯಲ್ಲಿ ಕಾರ್ಯನಿರ್ವಹಣೆಗೆ ಅಡಿಪಡಿಸಿದ್ದಾರೆ. ಅವರನ್ನ ಕೂಡಲೇ ಬಂಧಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿದರು. ನಂತರ ಉಪನಗರ ಠಾಣೆ ಎದುರೇ ಜೆಡಿಎಸ್ ಕಾರ್ಯಕರ್ತರ ವಿರುದ್ಧ ಪ್ರತಿಭಟನೆ ನಡೆಸಿದರು.

ಭಾರತ್ ಬಂದ್ ಹಿನ್ನೆಲೆ ಕಾಂಗ್ರೆಸ್ ಶಾಸಕ ಪ್ರಸಾದ ಸಬ್ಬಯ್ಯ ನೇತೃತ್ವದಲ್ಲಿ ಬೃಯತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ  ಪ್ರತಿಭಟನಾ‌ಮೆವರಣಿಗೆ ನಡೆಸಿದದರು. ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಮೋದಿ ಹಠಾವ್ ದೇಶ ಬಚಾವ್ ಎಂದು ಘೋಷಣೆ ಕೂಗಿದರು.  ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನ ಉದ್ದೇಶಿಸಿ ಮಾತನಾಡಿದ ಶಾಸಕ ಪ್ರಸಾದ ಅಬ್ಬಯ್ಯ, ಕೇಂದ್ರ ಸರ್ಕಾರ ದೇಶದ ಜನರಿಗೆ ಮೋಸ ಮಾಡಿದೆ. ಜನರಿಗೆ ಸುಳ್ಳು ಭರವಸೆ ನೀಡಿ. ದೇಶದಲ್ಲಿ ದುರಾಡಳಿತ ನಡೆಸುತ್ತಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ಮಾಡಿದ್ರು. ಪ್ರತಿಭಟನೆಯಲ್ಲಿ ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಮಾಜಿ ಸಂಸದ ಐ.ಜಿ. ಸನದಿ, ವಿಧಾನಪರಿಷ್ ಸದಸ್ಯ ಶ್ರೀನಿವಾಸ ಮಾನೆ ಸೇರಿದಂತೆ ಕಾಂಗ್ರೆಸ್ ಅನೇಕ ನಾಯಕರು ಭಾಗಿಯಾಗಿದ್ದರು.

ಒಟ್ಟಾರೆಯಾಗಿ ಭಾರತ್ ಬಂದ್ ಬಿಸಿ ವಾಣಿಜ್ಯ ನಗರಿಗೂ ತಟ್ಟಿತ್ತು. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ವರಗೆ ಹುಬ್ಬಳ್ಳಿ ಸ್ತಬ್ದವಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ