ಜನಸಾಮಾನ್ಯರನ್ನು ವಂಚಿಸುತ್ತಿರುವ ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆ ತಡೆಗಟ್ಟಬೇಕು: ಕರವೇ ಒತ್ತಾಯ

 

ಬೆಂಗಳೂರು, ಸೆ.10- ದೇಶದಲ್ಲಿ ಮಹತ್ವದ ಬದಲಾವಣೆ ತರುತ್ತೇವೆ ಎಂದು ಹೇಳಿಕೆ ನೀಡುತ್ತಾ ಜನಸಾಮಾನ್ಯರನ್ನು ವಂಚಿಸುತ್ತಿರುವ ಕೇಂದ್ರ ಸರ್ಕಾರ ಈ ಕೂಡಲೇ ತೈಲ ಬೆಲೆ ಏರಿಕೆಯನ್ನು ತಡೆಗಟ್ಟಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ತೈಲ ಬೆಲೆ ಏರಿಕೆ ಖಂಡಿಸಿ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಮುಂಭಾಗ ಕೇಂದ್ರ ಸರ್ಕಾರದ ಭೂತ ದಹನ ನಡೆಸಿದ ನಂತರ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯ ಮಾಡಿದರು.

80ರೂ.ಗಳ ಗಡಿ ದಾಟಿರುವ ಪೆಟ್ರೋಲ್ ಬೆಲೆ ಏರಿಕೆಯನ್ನು ತಡೆಗಟ್ಟುವಂತೆ ಒತ್ತಾಯಿಸಿ ಇಂದು ಕರೆಯಲಾಗಿರುವ ಭಾರತ್ ಬಂದ್‍ಗೆ ನಮ್ಮ ವೇದಿಕೆ ಸಂಪೂರ್ಣ ಬೆಂಬಲ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ನಮ್ಮ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ನಾರಾಯಣಗೌಡ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ